ಕರ್ನಾಟಕದೇಶಪ್ರಮುಖ ಸುದ್ದಿಮೈಸೂರು

ಕಾವೇರಿ ವಿವಾದ: ಪ್ರಮಾಣಪತ್ರ ಹಿಂಪಡೆಯುವಂತೆ ಕೇಂದ್ರ ಸರ್ಕಾರಕ್ಕೆ ಅಣ್ಣಾ ಡಿಎಂಕೆ ಒತ್ತಾಯ

ಚೆನ್ನೈ: ಕಾವೇರಿ ನಿರ್ವಹಣಾ ಮಂಡಳಿ ರಚನೆ ಸಾಧ್ಯವಿಲ್ಲವೆಂದು ಸುಪ್ರೀಂ ಕೋರ್ಟ್‍ಗೆ ಪ್ರಮಾಣಪತ್ರ ಸಲ್ಲಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ತಮಿಳುನಾಡು ವಿರೋಧಿಯಾಗಿದೆ ಎಂದು ಜೆ. ಜಯಲಲಿತಾ  ನೇತೃತ್ವದ ಅಣ್ಣಾ ಡಿಎಂಕೆ ಆರೋಪಿಸಿದೆ.

ಅತ್ತ ನವದೆಹಲಿಯಲ್ಲಿ ಕೇಂದ್ರ ಸರ್ಕಾರ ಸುಪ್ರಿಂ ಕೋರ್ಟ್‍ಗೆ ಅಫಿಡವಿಟ್ ಸಲ್ಲಿರುವ ಸುದ್ದಿ ತಿಳಿಯುತ್ತಿದ್ದಂತೆ ಆತಂಕಕ್ಕೊಳಗಾದ ಎಐಡಿಎಂಕೆ ವಕ್ತಾರೆ ಸರಸ್ವತಿ ಅವರು ಚೆನ್ನೈನಲ್ಲಿ ಈ ಹೇಳಿಕೆ ನೀಡಿದ್ದು, “ಕೇಂದ್ರ ಸರ್ಕಾರ ಕರ್ನಾಟಕದ ಪಕ್ಷಪಾತಿಯಾಗಿ ನಡೆದುಕೊಂಡಿದೆ. ಜಲಹಂಚಿಕೆ ಪ್ರಕರಣ ಹೀಗಾಗಬಹುದು ಎಂದೇ ಜಯಲಲಿತಾ ಅವರು ಸುಪ್ರೀಂ ಕೋರ್ಟ್‍ ಮೆಟ್ಟಿಲು ಏರಿದ್ದರು. ತಮಿಳುನಾಡಿಗೆ ಮಾರಕವಾಗಿರುವ ಈ ನಿರ್ಧಾರದಿಂದ ಕೇಂದ್ರ ಸರ್ಕಾರ ತಕ್ಷಣ ಹಿಂದೆ ಸರಿಯಬೇಕು” ಎಂದು ಆಗ್ರಹಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ತೀವ್ರ ಅನಾರೋಗ್ಯಕ್ಕೀಡಾಗಿ ಕಳೆದ 12 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದು ಇಲ್ಲಿ ಗಮನಾರ್ಹ.

Leave a Reply

comments

Related Articles

error: