ಕರ್ನಾಟಕಪ್ರಮುಖ ಸುದ್ದಿಮೈಸೂರು

ಕಾವೇರಿ ಪಾತ್ರದ ರೈತರಿಗೆ ನೀರು ಹರಿಸಲು ಸರ್ಕಾರದ ಚಿಂತನೆ; ತಮಿಳುನಾಡಿಗೆ ನೀರು ಬಿಡುಗಡೆಗೆ ಬಿಜೆಪಿ ವಿರೋಧ

ಬೆಂಗಳೂರು: ಕಾವೇರಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ಬಳಸಿಕೊಳ್ಳಲು ಈ ಮೊದಲು ತೀರ್ಮಾನಿಸಿದ್ದ ರಾಜ್ಯ ವಿಧಾನಮಂಡಲದ ನಿರ್ಧಾರದಲ್ಲಿ ಬದಲಾವಣೆ ತಂದು ರೈತರ ಬೆಳೆಗಳಿಗೆ ನೀರು ಹರಿಸಲು ಚಿಂತನೆಯನ್ನು ರಾಜ್ಯ ಸರ್ಕಾರ ನಡೆಸುತ್ತಿದೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಅ.3) ಕರೆದಿರುವ ಕಾವೇರಿ ವಿಶೇಷ ಅಧಿವೇಶದನಲ್ಲಿ ಪ್ರಸ್ತಾಪ ಮಾಡಿದ್ದಾರೆ.

ಸುಪ್ರೀಂ ಕೋರ್ಟ್‍ ತಮಿಳುನಾಡಿಗೆ ನೀರು ಹರಿಸುವಂತೆ ಮೇಲಿಂದ ಮೇಲೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುತ್ತಿದೆ. ಈ ಮೊದಲು ಕುಡಿಯಲು ಮಾತ್ರ ನೀರು ಬಳಸಲು ನಿರ್ಧರಿಸಿದ್ದೆವು. ಆದರೆ ನಮ್ಮ ಪಾಲಿನ ನೀರನ್ನು ಬಳಸಿಕೊಳ್ಳಲು ನಮಗೆ ಕಾವೇರಿ ನದಿ ಪ್ರಾಧಿಕಾರದ ತೀರ್ಪಿನಲ್ಲೂ ಅವಕಾಶ ಇರುವುದರಿಂದ ರಾಜ್ಯದ ಬೆಳೆಗಳಿಗೆ ನೀರು ಹರಿಸಲು ರಾಜ್ಯ ಸರ್ಕಾರ ಚಿಂತಿಸುತ್ತಿದೆ.

ಬಿಜೆಪಿ ವಿರೋಧ:

ನಮ್ಮ ರೈತರಿಗೆ ನೀರು ಬಿಡುವ ನೆಪ ಹೂಡಿ ತಮಿಳುನಾಡಿಗೆ ನೀರು ಹರಿಸುವುದು ತರವಲ್ಲ. ಹಾಗೇನಾದರು ತಮಿಳುನಾಡಿಗೆ ನೀರು ಹರಿಸಿದರೆ ಬಿಜೆಪಿ ಉಗ್ರವಾಗಿ ವಿರೋಧಿಸಲಿದೆ ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ಎಚ್ಚರಿಸಿದೆ. ಈ ಕುರಿತು ಮಾತನಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ಮುಖ್ಯಮಂತ್ರಿಗಳು ಸದನದ ನಿಲುವಿಗೆ ಬದ್ಧರಾಗಿರಬೇಕು. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು ಎಂದು ಆಗ್ರಹಿಸಿದ್ದಾರೆ.

Leave a Reply

comments

Related Articles

error: