ಸುದ್ದಿ ಸಂಕ್ಷಿಪ್ತ
ಮೇ 24 ರಂದು ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ
ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಂ ಅವರು ಮೇ, 24 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಸಚಿವರು ಮೇ, 24 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಕೊಡಗು ಜಿಲ್ಲೆಯ ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ನಂತರ ಮಧ್ಯಾಹ್ನ 1.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ 2014-15ನೇ ಸಾಲಿನ ಮಡಿಕೇರಿ ನಗರಸಭೆ ವತಿಯಿಂದ ವಿತರಿಸಲಾಗುವ ಕಸ ವಿಲೇವಾರಿ ವಾಹನಗಳನ್ನು ಸಾರ್ವಜನಿಕ ಸೇವೆಗೆ ಲೋಕಾರ್ಪಣೆ ಮಾಡಲಿದ್ದಾರೆ. 2017-18ನೇ ಸಾಲಿನಲ್ಲಿ ಮಡಿಕೇರಿ ನಗರಸಭೆ ವತಿಯಿಂದ ನಿರ್ವಹಿಸಲಾಗಿರುವ ಎಲ್ಲಾ ಕಾಮಗಾರಿಗಳಿಗೆ ಚಾಲನೆ ನೀಡುವುದು (ಕಾಮಗಾರಿಗಳಿಗೆ ಕಾರ್ಯಾದೇಶ ನೀಡುವುದು). ನಗರಸಭೆ ವತಿಯಿಂದ ಆಯೋಜಿಸಿರುವ ಸಾರ್ವಜನಿಕರು ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡುವ ಬಗ್ಗೆ ಬೀದಿನಾಟಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಅವರು ತಿಳಿಸಿದ್ದಾರೆ. (ವರದಿ:ಕೆಸಿಐ,ಎಲ್.ಜಿ)