ದೇಶಪ್ರಮುಖ ಸುದ್ದಿ

ನಾಳೆ 2 ಗಂಟೆಯೊಳಗೆ ತಮಿಳುನಾಡಿಗೆ ನೀರು ಬಿಡಿ: ಸುಪ್ರೀಂ

ನವದೆಹಲಿ: ನಾಳೆ ಮಧ್ಯಾಹ್ನ 2 ಗಂಟೆಯೊಳಗೆ ಕರ್ನಾಟಕ ಸರಕಾರವು ತಮಿಳುನಾಡಿಗೆ ಕಾವೇರಿ ನೀರನ್ನು ಬಿಡಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.

ಕಾವೇರಿ ನೀರು ಬಿಡುವುದಿಲ್ಲ ಎಂಬ ಕರ್ನಾಟಕ ಸರಕಾರದ ತೀರ್ಮಾನದ ಬಗ್ಗೆ ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಿ, ‘ಆದೇಶಗಳನ್ನು ಪಾಲಿಸುವ ಮೂಲಕ ಸುಪ್ರೀಂ ತೀರ್ಪಿಗೆ ಗೌರವ ತೋರಿಸಿ’ ಎಂದು ಕರ್ನಾಟಕಕ್ಕೆ ಸೂಚಿಸಿದೆ. ತಮಿಳುನಾಡಿಗೆ ನೀರು ಬಿಟ್ಟಿದೆಯೋ ಇಲ್ಲವೋ ಎಂಬ ಬಗ್ಗೆ ಮಂಗಳವಾರ ಕೋರ್ಟ್‍ಗೆ ತಿಳಿಸುವಂತೆ ಸೂಚಿಸಿದೆ.

ಅ.1ರಿಂದ 6ರವರೆಗೆ 6 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಳೆದ ವಾರ ಸುಪ್ರೀಂ ಸೂಚಿಸಿತ್ತು. ಏತನ್ಮಧ್ಯೆ ಕೇಂದ್ರ ಸರಕಾರವು ಸುಪ್ರೀಂ ಕೋರ್ಟ್‍ನಲ್ಲಿ ಕಾವೇರಿ ನಿರ್ವಹಣಾ ಮಂಡಳಿ ಬಗ್ಗೆ ತನ್ನ ನಿಲುವನ್ನು ಬದಲಾಯಿಸಿದೆ. ನಿರ್ವಹಣಾ ಮಂಡಳಿ ರಚನೆ ಅಗತ್ಯವಿಲ್ಲ ಎಂದು ಕೇಂದ್ರ ಸುಪ್ರೀಂಗೆ ಪ್ರಮಾಣ ಪತ್ರ ಸಲ್ಲಿಸಿದೆ.

 

Leave a Reply

comments

Related Articles

error: