ಮೈಸೂರು

ಸರ್ಕಾರದ ಯೋಜನೆ ಮತ್ತು ಸವಲತ್ತುಗಳ ವಿತರಣೆಗೆ ವಿಶೇಷ ಕಾರ್ಯಕ್ರಮ, ಜನರಿಗೆ ಮನನ-ಜನರಿಗೆ ನಮನ : ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು,ಮೇ.24:- ಸರ್ಕಾರ ನಾಲ್ಕು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸರ್ಕಾರದ ಯೋಜನೆ ಮತ್ತು ಸವಲತ್ತುಗಳನ್ನು ಸಾರ್ವಜನಿಕರಿಗೆ ವಿತರಿಸಲು ಜೂನ್.3ರಂದು  ಬೆಳಿಗ್ಗೆ 11ಗಂಟೆಗೆ ಮೈಸೂರು ಮಹಾರಾಜ ಕಾಲೇಜಿನ ಮೈದಾನದಲ್ಲಿ  ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ತಿಳಿಸಿದರು.

ಮೈಸೂರು ಸರ್ಕಾರಿ ಅತಿಥಿಗೃಹದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಮೈಸೂರು ಕಂದಾಯ ವಿಭಾಗ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ  ಜಿಲ್ಲಾಧಿಕಾರಿಗಳ ಸಭೆ ಕರೆದು ಫಲಾನುಭವಿಸಗಳ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳುವಂತೆ ಸೂಚಿಸಿದರು. ಎಷ್ಟು ಮಂದಿ ಫಲಾನುಭವಿಗಳನ್ನು ಕರೆಯುತ್ತೀರಿ ಎಂಬಿತ್ಯಾದಿ ಮಾಹಿತಿಗಳನ್ನು ಸಲ್ಲಿಸಬೇಕೇಂದು ತಿಳಿಸಿದರು. ಸರ್ಕಾರದ ಸೌಲಭ್ಯ ನೂರಕ್ಕೆ ನೂರರಷ್ಟು ಜನರಿಗೆ ತಲುಪುವಂಥಹ ಕೆಲಸ ಅಧಿಕಾರಿಗಳು ಮಾಡಬೇಕಿದ್ದು, ಆಯಾ ಜಿಲ್ಲೆಗಳ ಫಲಾನುಭವಿಗಳನ್ನು ಕರೆತರುವ ಜವಾಬ್ದಾರಿಯನ್ನೂ ಅಧಿಕಾರಿಗಳಿಗೇ ನೀಡಬೇಕೆಂದರು.

33 ಇಲಾಖೆಗಳಲ್ಲೂ ಯೋಜನೆಗಳಿದ್ದು, ಅದನ್ನು  ಫಲಾನುಭವಿಗಳಿಗೆ ವಿತರಿಸುತ್ತಿವೆ ಎಂದು ತಿಳಿಸಿದರಲ್ಲದೇ ಕಾರ್ಯಕ್ರಮದಂದು ಜಿಲ್ಲಾ ಉಸ್ತುವಾರಿ ಸಚಿವರುಗಳು,    ಜಿಲ್ಲಾಧಿಕಾರಿಗಳು, ಅಧಿಕಾರಿಗಳು ಪಾಲ್ಗೊಳ್ಳುತ್ತಾರೆ. 50ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಸೌಲಭ್ಯ ವಿತರಣೆಯೇ ಸಂಭ್ರಮ, ಜನರಿಗೆ ಮನನ-ಜನರಿಗೆ ನಮನ ಶೀರ್ಷಿಕೆಯಡಿ ಕಾರ್ಯಕ್ರಮ ನಡೆಯಲಿದೆ ಎಂದರು.

ಈ ಸಂದರ್ಭ ಸಮಾಜ ಕಲ್ಯಾಣ ಇಲಾಖೆ ಸವಿವ  ಆಂಜನೇಯ, ಜಿಲ್ಲಾಧಿಕಾರಿ ಡಿ.ರಂದೀಪ್, ಶಾಸಕ ಮಂಜುನಾಥ್,  ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು. (ವರದಿ:ಬಿ.ಎಂ,ಎಸ್.ಎಚ್)

Leave a Reply

comments

Related Articles

error: