ಕರ್ನಾಟಕಪ್ರಮುಖ ಸುದ್ದಿ

ಮರಕ್ಕೆ ಡಿಕ್ಕಿಯಾದ ಖಾಸಗಿ ಬಸ್ : ಓರ್ವ ಸಾವು

ರಾಜ್ಯ(ಹಾಸನ) ಮೇ.24:- ಖಾಸಗಿ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ಬಳಿಯ ಕಾಫಿಡೇ ಬಳಿ ನಡೆದಿದೆ.

ಮೃತನನ್ನು ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದ ಮಂಜುನಾಥ್ (38) ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಅವಘಡ ನಡೆದಿದೆ. 20 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಚಾಲಕನ ನಿರ್ಲಕ್ಷ್ಯದಿಂದಾಗಿ ಮರಕ್ಕೆ ಬಸ್ ಡಿಕ್ಕಿಹೊಡೆದಿದೆ ಎನ್ನಲಾಗಿದೆ.  ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್).

Leave a Reply

comments

Related Articles

error: