ಮೈಸೂರು

ಉಚಿತ ಶಿಬಿರಗಳ ಮೂಲಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿರುವುದು ಶ್ಲಾಘನೀಯ : ಸೋಮೇಶ್ವರನಾಥ ಸ್ವಾಮೀಜಿ

ಮೈಸೂರು,ಮೇ.25:-  ಮೈಸೂರು-ಚಾಮರಾಜನಗರ ಜಿಲ್ಲೆ ಒಕ್ಕಲಿಗರ ಸಂಘ ಬಿಜಿಎಸ್ ಅಪೊಲೋ ಆಸ್ಪತ್ರೆ ಸಹಯೋಗದಲ್ಲಿ ಒಂದು ದಿನದ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿತ್ತು.  250 ಕ್ಕೂ ಹೆಚ್ಚು ಮಂದಿ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಶಿಬಿರ ಯಶಸ್ವಿಯಾಗಿ ನಡೆಯಿತು.
ವಿದ್ಯಾರಣ್ಯಪುರಂನಲ್ಲಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆದಿಚುಂಚನಗಿರಿ ಮಠದ ಸೋಮೇಶ್ವರನಾಥ ಸ್ವಾಮೀಜಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಉಚಿತ ಶಿಬಿರಗಳ ಮೂಲಕ ಸಾಮಾಜಿಕ ಕಾರ್ಯಗಳಲ್ಲಿ ಸಂಘ ಸಂಸ್ಥೆಗಳು ತೊಡಗಿರುವುದು ಶ್ಲಾಘನೀಯವಾಗಿದೆ. ಮುಂದಿನ ದಿನಗಳಲ್ಲಿಯೂ ಇಂತಹ ಸಾಮಾಜಿಕ ಕಾರ್ಯಕ್ರಮಗಳನ್ನು ಮುಂದುವರಿಸುವಂತೆ ಶುಭಹಾರೈಸಿದರು. ಈ ಸಂದರ್ಭ ಪ್ರಧಾನ ಕಾರ್ಯದರ್ಶಿ ಮತ್ತು ನಗರಪಾಲಿಕೆ ಸದಸ್ಯ ಪಿ.ಪ್ರಶಾಂತ್‍ಗೌಡ, ಖಜಾಂಚಿ ಸಣ್ಣಸ್ವಾಮಿಗೌಡ, ನಿರ್ದೇಶಕರಾದ ನರಸೇಗೌಡ, ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.
ಸುಮಾರು 250 ಕ್ಕೂ ಹೆಚ್ಚು ಮಂದಿ ಶಿಬಿರದ ಪ್ರಯೋಜನ ಪಡೆದರು.  (ವರದಿ:ಬಿ.ಎಂ,ಎಸ್.ಎಚ್)

Leave a Reply

comments

Related Articles

error: