
ಪ್ರಮುಖ ಸುದ್ದಿಮೈಸೂರು
ಅರಿವು ಶೈಕ್ಷಣಿಕ ಸಾಲ ಯೋಜನೆ : ಅರ್ಜಿ ಸಲ್ಲಿಕೆ ವಿಸ್ತರಣೆ
ಮಂಡ್ಯ, ಮೇ 25 : ಕಳೆದ ಏಪ್ರಿಲ್ 26 ರಂದು ಹೊರಡಿಸಿದ್ದ ಪ್ರಕಟಣೆಯಲ್ಲಿ ತಿಳಿಸಿದ್ದಂತೆ ಸಿ.ಇ.ಟಿ ಮೂಲಕ ಪ್ರವೇಶ ಪಡೆದು ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಾಲ ಮಂಜೂರು ಮಾಡಲು ಆನ್’ಲೈನ್ ಅರ್ಜಿಗಳಿಗಾಗಿ ನಿಗದಿಪಡಿಸಿರುವ ದಿನಾಂಕವನ್ನು ಮೇ 20 ರಿಂದ ಜೂನ್ 9ಕ್ಕೆ ವಿಸ್ತರಿಸಲಾಗಿದೆ.
ಸಾಲ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವೆಬ್ಸೈಟ್ನಲ್ಲಿ ಲಾಗಿನ್ ಆಗಿ ವೆಬ್ಸೈಟ್ನಲ್ಲಿ ಲಭ್ಯವಿರುವ username-infra/dbcdcarivu ಮತ್ತು passward-DB9d#098 ನ್ನು ನಮೂದಿಸಿ ಅರ್ಜಿಯನ್ನು ಆನ್ ಲೈನ್ನಲ್ಲಿ ಮೇ 9 ರ ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಚಾಮುಂಡೆಶ್ವರಿ ನಗರ, ಮಂಡ್ಯ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.
-ಎನ್.ಬಿ.ಎನ್.