ಪ್ರಮುಖ ಸುದ್ದಿಮೈಸೂರು

ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಮಂಡ್ಯ, ಮೇ 25 : ಜಿಲ್ಲೆಯ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖಾ ವ್ಯಾಪ್ತಿಗೊಳಪಡುವ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಮಂಡ್ಯ ತಾಲ್ಲೂಕಿನ ಮೆಟ್ರಿಕ್ ನಂತರದ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯ, ಮದ್ದೂರು ತಾಲ್ಲೂಕಿನ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ, ಕೆ.ಆರ್.ಪೇಟೆ ತಾಲ್ಲೂಕಿನ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ಹಾಗೂ ನಾಗಮಂಗಲ ತಾಲ್ಲೂಕಿನ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯಗಳಿಗೆ ಸೇರಬಯಸುವ ಅಭ್ಯರ್ಥಿಗಳು ಅರ್ಜಿಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಅಧಿಕಾರಿಗಳ ಕಛೇರಿ, ನಂ.14, ಎ ಬ್ಲಾಕ್ , 1ನೇ ಕ್ರಾಸ್, ವಿವೇಕಾನಂದ ನಗರ, ಕೆರೆ ಅಂಗಳ, ನಾಗಮಂಗಲ ರಸ್ತೆ ಮಂಡ್ಯ – ಇಲ್ಲಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಇದೇ ಕಛೇರಿಯಲ್ಲಿ ಸಲ್ಲಿಸಲು ಕೊನೆಯ ಜೂನ್ 30.

ಹೆಚ್ಚಿನ ಮಾಹಿತಿಗಾಗಿ ಮಂಡ್ಯ, ಮದ್ದೂರು ದೂರವಾಣಿ ಸಂಖ್ಯೆ: 9880743927/9148538871 ಅನ್ನು ಹಾಗೂ ನಾಗಮಂಗಲ ಕೆ.ಆರ್. ಪೇಟೆ 8904671173 ಅನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಂಡು ವಿದ್ಯಾರ್ಥಿಗಳು ಇಲಾಖೆಯ ಪ್ರಯೋಜನ ಪಡೆದುಕೊಳ್ಳುವಂತೆ ಮಂಡ್ಯ ಅಲ್ಪಸಂಖ್ಯಾಂತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

-ಎನ್.ಬಿ.ಎನ್.

Leave a Reply

comments

Related Articles

error: