ಸುದ್ದಿ ಸಂಕ್ಷಿಪ್ತ

ಮಡಿಕೇರಿ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಷಂಶುದ್ದಿನ್ ಆಯ್ಕೆ

ಮಡಿಕೇರಿ ಮೇ 25 :- ಮಡಿಕೇರಿ ತಾಲೂಕು 8ನೇ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಬಿ.ಎ.ಷಂಶುದ್ದಿನ್ ಅವರು ನೇಮಕಗೊಂಡಿದ್ದಾರೆ. ಕ.ಸಾ.ಪ ತಾಲೂಕು ಘಟಕದ ಅಧ್ಯಕ್ಷ ಕುಡೆಕಲ್ ಸಂತೋಷ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಷಂಶುದ್ದಿನ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಕನ್ನಡಪರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಷಂಶುದ್ದಿನ್ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ ಹತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು, ಹಲವಾರು ಕೃತಿಗಳನ್ನು, ನಾಟಕಗಳನ್ನು ರಚಿಸಿದ್ದಾರೆ. ಬಹುಭಾಷಾ ಸಾಹಿತಿಯಾಗಿರುವ ಷಂಶುದ್ದಿನ್ ಅವರು 8 ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ನಡೆದ 7ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ. ಶ್ರೀಧರ್ ಹೆಗಡೆ ಆಯ್ಕೆಯಾಗಿದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: