
ಕರ್ನಾಟಕ
ದ್ವಿಚಕ್ರ ವಾಹನಕ್ಕೆ ಬೋಲೆರೋ ಡಿಕ್ಕಿ : ಓರ್ವ ಸಾವು
ರಾಜ್ಯ(ಬೆಂಗಳೂರು) ಮೇ.26:- ದ್ವಿಚಕ್ರ ವಾಹನಕ್ಕೆ ಬೋಲೆರೋ ವಾಹನ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಗೌರಿಬಿದನೂರಿನಲ್ಲಿ ನಡೆದಿದೆ.
ಮೃತರನ್ನು ಇಮ್ರಾನ್ ಎಂದು ಗುರುತಿಸಲಾಗಿದೆ. ಗೌರಿಬಿದನೂರು ಹೊರವಲಯದ ಸಕ್ಕರೆ ಕಾರ್ಖಾನೆ ಬಳಿ ಘಟನೆ ನಡೆದಿದ್ದು, ಗಾಯಾಳುಗಳನ್ನು ಬೆಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್).