ಕರ್ನಾಟಕಮೈಸೂರು

ಮತ್ತೆ ತಮಿಳುನಾಡಿಗೆ ಹರಿದ ಕಾವೇರಿ

ಬೆಂಗಳೂರು: ವಿಧಾನಮಂಡಲ ವಿಶೇಷ ಅಧಿವೇಶನದಲ್ಲಿ ಅನುಮತಿ ಪಡೆದ ರಾಜ್ಯ ಸರಕಾರ ನಿನ್ನೆ ಮಧ್ಯರಾತ್ರಿಯಿಂದಲೇ ತಮಿಳುನಾಡಿಗೆ ನೀರು ಹರಿಸುತ್ತಿದೆ. ಸುಮಾರು 6 ಸಾವಿರ ಕ್ಯೂಸೆಕ್ ನೀರು ಬಿಟ್ಟಿದೆ ಎನ್ನಲಾಗಿದೆ. ಕೆಆರ್‍ಎಸ್, ಕಬಿನಿ, ಹಾರಂಗಿ, ಹೇಮಾವತಿ ಜಲಾಶಯಗಳ ಮೂಲಕ ಕೂಡ ನೀರನ್ನು ಬಿಡುಗಡೆ ಮಾಡಿದೆ ಎಂಬ ಮಾಹಿತಿ ಸಿಕ್ಕಿದೆ.

ಕಾವೇರಿ ನ್ಯಾಯಾಧಿಕರಣದ ಐ ತೀರ್ಪಿನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ಕರ್ನಾಟಕ ಸಲ್ಲಿಸಿರುವ ಅರ್ಜಿಯ ಮರು ವಿಚಾರಣೆ ಅ.18ರಂದು ನಡೆಯಲಿದೆ. ನ್ಯಾಯಾಂಗ ನಿಂದನೆಯಿಂದಾಗಿ ರಾಜ್ಯಕ್ಕೆ ಯಾವುದೇ ಹಿನ್ನಡೆಯಾಗಬಾರದು ಎಂಬ ನಿಟ್ಟಿನಲ್ಲಿ ಉಭಯ ಸದನಗಳ ಅನುಮತಿ ಪಡೆದು ರಾಜ್ಯ ಸರಕಾರ ಈ ನಿರ್ಣಯ ಕೈಗೊಂಡಿತ್ತು.

ಜಲಾಶಯದಲ್ಲಿ ಸಂಗ್ರಹವಿರುವ ನೀರಿನಲ್ಲಿ ಕುಡಿಯುವ ನೀರನ್ನು ಹೊರತುಪಡಿಸಿ, ಉಳಿದ ನೀರನ್ನು ರಾಜ್ಯದ ರೈತರಿಗೆ ಹರಿಸಲಾಗಿದ್ದು, ಈ ನೀರು ಸಹಜವಾಗಿ ತಮಿಳುನಾಡಿಗೆ ಸಾಗಲಿದೆ.

ಮಂಗಳವಾರ ಮಧ್ಯಾಹ್ನದೊಳಗೆ ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕ್ಕೆ ಸುರ್ಪೀಂ ಆದೇಶಿಸಿತ್ತು. ಇಂದು ಮಧ್ಯಾಹ್ನ ಮತ್ತೆ ಸುಪ್ರೀಂ ಕೋರ್ಟ್‍ನಲ್ಲಿ ವಿಚಾರಣೆ ನಡೆಯಲಿದೆ.

Leave a Reply

comments

Related Articles

error: