
ಕರ್ನಾಟಕಪ್ರಮುಖ ಸುದ್ದಿ
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಯುವಕನ ವಿರುದ್ಧ ದೂರು ದಾಖಲು
ರಾಜ್ಯ(ಮಂಡ್ಯ)ಮೇ.27:- ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಯುವಕನೋರ್ವ ಅತ್ಯಾಚಾರ ನಡೆಸಿದ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ತಾನು ವಿವಾಹವಾಗುತ್ತೇನೆಂದು ನಂಬಿಸಿದ ಯುವಕ ತನ್ನ ಕಾಮತೃಷೆಯನ್ನು ತೀರಿಸಿಕೊಂಡು ಇದೀಗ ಆಕೆ ಗರ್ಭಿಣಿಯಾಗುತ್ತಿದ್ದಂತೆ ನಾಪತ್ತೆಯಾಗಿದ್ದಾನೆ. ವಂಚಿಸಿದ ಯುವಕನನ್ನು ಅದೇ ಗ್ರಾಮದ ಅಖಿಲೇಶ್ ಎಂದು ಗುರುತಿಸಲಾಗಿದೆ. ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ದ ಪೋಸ್ಕೋ ಪ್ರಕರಣ ದಾಖಲಾಗಿದೆ. (ವರದಿ:ಕೆ.ಎಸ್,ಎಸ್.ಎಚ್)