ಮೈಸೂರು

ಅರಿವು ಸಾಲ ಯೋಜನೆ ಅರ್ಜಿ ಸಲ್ಲಿಕೆಗೆ ಜೂನ್ 1 ಕಡೆಯ ದಿನ

ಚಾಮರಾಜನಗರ (ಪ್ರಮುಖ ಸುದ್ದಿ) ಮೇ 27 : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಸಿಇಟಿ ಬರೆದಿರುವ ವಿದ್ಯಾರ್ಥಿಗಳಿಗೆ ನೀಡುವ ಅರಿವು ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 1 ಕಡೆಯ ದಿನವಾಗಿದೆ.

ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು ಹಾಗೂ ಪಾರ್ಸಿ ಜನಾಂಗದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‍ಗಳಿಗೆ ಪ್ರವೇಶ ಪಡೆಯಲು ಅರಿವು ಸಾಲ ಯೋಜನೆಯಡಿ ನೆರವು ನೀಡಲಿದ್ದು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳಬೇಕು. ವಿವರಗಳಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು  ದೂ.ಸಂ.08226-222332 ಸಂಪರ್ಕಿಸಬಹುದು.

-ಎನ್.ಬಿ.ಎನ್.

Leave a Reply

comments

Related Articles

error: