ಕರ್ನಾಟಕಮೈಸೂರು

ಕೊಡಗು ಜಿಲ್ಲಾ ಕಾಂಗ್ರೆಸ್‍ನಿಂದ ನೆಹರು ಸ್ಮರಣೆ

ಮಡಿಕೇರಿ, ಮೇ 27 : ದೇಶವನ್ನು ಸುದೀರ್ಘ ಕಾಲ ಆಳಿದ ಮಾಜಿ ಪ್ರಧಾನಿ ದಿವಂಗತ ಜವಾಹರ್ ಲಾಲ್ ನೆಹರು ಅವರು ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಪ್ರತಿಯೊಬ್ಬ ಭಾರತೀಯರೂ ಇವರನ್ನು ಸ್ಮರಿಸುವ ಅಗತ್ಯವಿದೆ ಎಂದು ರೇಷ್ಮೆ ಮಾರಾಟ ಮಂಡಳಿಯ ಅಧ್ಯಕ್ಷರು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಟಿ.ಪಿ.ರಮೇಶ್ ಅಭಿಪ್ರಾಯಪಟ್ಟಿದ್ದಾರೆ.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ನೆಹರು ಅವರ 53 ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನೆಹರು ಅವರ ಗುಣಗಾನ ಮಾಡಿದರು. ಪಂಚ ವಾರ್ಷಿಕ ಯೋಜನೆಯ ಮೂಲಕ ಅಭಿವೃದ್ಧಿಪರ ಚಿಂತನೆ ಹರಿಸಿದ ನೆಹರು ಅವರು ಸಾಮಾಜಿಕ, ಶೈಕ್ಷಣಿಕ, ಕೈಗಾರಿಕೆ, ಕೃಷಿ, ರಕ್ಷಣಾ ಕ್ಷೇತ್ರಗಳ ಉನ್ನತೀಕರಣಕ್ಕಾಗಿ ಶ್ರಮಿಸಿದರು ಎಂದರು.

ದೇಶವನ್ನು ಮುನ್ನಡೆಸುವ ಅಡಿಪಾಯವನ್ನು ಹಾಕಿಕೊಟ್ಟ ನೆಹರು ಅವರ ಕ್ರಿಯಾಶೀಲ ಆಡಳಿತದ ಫಲವಾಗಿ ಇಂದು ದೇಶ ಎಲ್ಲಾ ಕ್ಷೇತ್ರಗಳಲ್ಲೂ ಗಮನಾರ್ಹ ಸಾಧನೆ ಮಾಡಿದೆ. ಅಭಿವೃದ್ಧಿಪಥದತ್ತ ಸಾಗುತ್ತಿರುವ ದೇಶದ ಜನತೆ ನೆಹರು ಅವರನ್ನು ಸ್ಮರಿಸುವ ಅಗತ್ಯವಿದೆ ಎಂದು ಟಿ.ಪಿ. ರಮೇಶ್ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕರಾದ ತೆನ್ನಿರಾ ಮೈನಾ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಜಿ.ಆರ್.ಪುಷ್ಪಲತಾ, ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಉಪಾಧ್ಯಕ್ಷರಾದ ಕೆ.ಯು.ಇಸ್ಮಾಯಿಲ್, ಪೊನ್ನಂಪೇಟೆ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಕಡೆಮಾಡ ಕುಸುಮಾ ಜೋಯಪ್ಪ, ಜಿಲ್ಲಾ ಆರೋಗ್ಯ ಸಮಿತಿ ಸದಸ್ಯರಾದ ಕುರಿಕಡ ಆನಂದ, ಹೆಚ್.ವಿ.ಚಂದ್ರು, ನೆಲ್ಲಿಹುದಿಕೇರಿಯ ಪಂಚಮಿ ಮೋಹನ್, ರಾಣಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು. ಗಣ್ಯರು ನೆಹರು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

-ಕೆಸಿಐ/ಎನ್‍ಬಿಎನ್

Leave a Reply

comments

Related Articles

error: