ಮೈಸೂರು

ಅಸಮಾನತೆಯ ವಿಷ ಬೀಜ ಬಿತ್ತಿ ವಿಷಮ ಸಮಾಜ ಸೃಷ್ಟಿಸಬಾರದು : ಮಲೆಯೂರು ಗುರುಸ್ವಾಮಿ

ಮೈಸೂರು, ಮೇ 27: ಎಲ್ಲರಲ್ಲೂ ಸಮನ್ವಯತೆ ಸೃಷ್ಟಿಸಿ ಸಮ ಸಮಾಜ ನಿರ್ಮಾಣ ಮಾಡಬೇಕೆ ಹೊರತು ಅಸಮಾನತೆಯ ಬೀಜ ಬಿತ್ತಿ ವಿಷಮ ಸಮಾಜ ಸೃಷ್ಟಿಸಬಾರದು ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ. ಮಲೆಯೂರು ಗುರುಸ್ವಾಮಿ ತಿಳಿಸಿದರು.
ಶನಿವಾರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಎಚ್.ವಿ.ರಾಜೀವ್ ಸ್ನೇಹ ಬಳಗದ ಸಹಯೋಗದಲ್ಲಿ ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿರುವ ಕಸಾಪ ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾನತೆಯ ಹರಿಕಾರರಾಗಿ ರಾಮಾನುಜಾಚಾರ್ಯರು-ಬಸವಣ್ಣ ಒಂದು ಚಿಂತನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಂಕರಾಚಾರ್ಯ, ರಾಮಾನುಜಾಚಾರ್ಯ ಹಾಗೂ ಮಧ್ವಾಚಾರ್ಯರು ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದರು. ಆದರೆ ಇಂದು ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕೆಲಸವಾಗುತ್ತಿದೆ. ಇಂತಹ ಸಮಾಜ ಒಡೆಯುವ ಮನಸ್ಸಿನಿಂದ ಆಚೆ ಬಂದು, ಮನಸ್ಸಿನಲ್ಲಿರುವ ಕೊಳೆಯನ್ನು ತೊಳೆದು ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರೂ ಶ್ರಮಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿದ್ವಾಂಸ ಡಾ.ಎಸ್.ಕೆ.ರಾಮಶೇಷನ್, ಕಸಾಪ ಜಿಲ್ಲಾಧ್ಯಕ್ಷ ಡಾ.ವೈ.ಡಿ.ರಾಜಣ್ಣ, ಸಮಾಜ ಸೇವಕ ಕೆ.ರಘುರಾಮ್, ಮೂಗೂರು ನಂಜುಂಡಸ್ವಾಮಿ, ಶರಣ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಎಂ.ಚಂದ್ರಶೇಖರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ: ಬಿ.ಎಂ,ಎಸ್.ಎಚ್)

Leave a Reply

comments

Related Articles

error: