ಕರ್ನಾಟಕ

ತ.ನಾ.ಮುಖ್ಯಮಂತ್ರಿ ಜಯಲಲಿತಾಗೆ ಕೃತಕ ಉಸಿರಾಟ

ಕಳೆದ ಸೆ.22 ರಿಂದ ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಒದಗಿಸಲಾಗಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆಯ ಮುಖ್ಯ ಕಾರ್ಯಕಾರಿ ಅಧಿಕಾರಿ ಸುಬ್ಬಯ್ಯ ವಿಶ್ವನಾಥನ್ ತಿಳಿಸಿದ್ದಾರೆ.

ಉಸಿರಾಟದ ಸೋಂಕಿನ ಸಮಸ್ಯೆ ಎದುರಿಸುತ್ತಿರುವ ಅವರಿಗೆ ರೋಗ ನಿರೋಧಕಗಳನ್ನು ನೀಡಲಾಗುತ್ತಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಬ್ರಿಟನ್ ತಜ್ಞ ವೈದ್ಯ ಡಾ.ರಿಚರ್ಡ್ ಬಿಯಾಲ್ ಸೇರಿದಂತೆ ಅಪೊಲೊ ವೈದ್ಯರ ತಂಡವು ಜಯಲಲಿತಾ ಅವರ ಯೋಗ ಕ್ಷೇಮ ನೋಡಿಕೊಳ್ಳುತ್ತಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ತಿಳಿಸಿದ್ದಾರೆ.

Leave a Reply

comments

Related Articles

error: