ಕರ್ನಾಟಕಪ್ರಮುಖ ಸುದ್ದಿ

ರಸ್ತೆಗಳಲ್ಲಿರುವ ಗುಂಡಿ ಮುಚ್ಚುವಂತೆ ಸೂಚನೆ ನೀಡಿದ ಸಿಎಂ ಸಿದ್ದರಾಮಯ್ಯ

ಪ್ರಮುಖಸುದ್ದಿ ರಾಜ್ಯ,(ಬೆಂಗಳೂರು)ಮೇ.28:- ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಪಾಲಿಕೆ ಮೇಯರ್ ಹಾಗೂ ಆಯುಕ್ತರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ  ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವುದು ಹರ್ಷದ ಸಂಗತಿ. ಮುಂಗಾರಿನಲ್ಲಿ ಇನ್ನೂ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು  ಹೇಳಿದರು. ತೀವ್ರ ಬರದಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ಮಳೆ ತಂಪೆರೆಯುತ್ತಿರುವುದು ಜನರು ಹಾಗೂ ರೈತರಲ್ಲಿ ಮಂದಹಾಸ ಮೂಡಿಸಿದೆ ಎಂದರು. ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಮಳೆಯಿಂದ ಅವಾಂತರಗಳು ಹೆಚ್ಚಾಗದಂತೆ ನೋಡಿಕೊಳ್ಳಬೇಕು. ಈ ಮೂಲಕ ಜನರಿಗೆ ತೊಂದರೆಯಾಗದಂತೆ ಜಾಗೃತರಾಗಿರುವಂತೆ ಸೂಚನೆ ನೀಡಿದರು. ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಕುರುಬ ಸಮುದಾಯದ ಹಾಲುಮತ ಮಹಾಸಭಾದ ಪದಾಧಿಕಾರಿಗಳ ಭೇಟಿಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಬೀಳುತ್ತಿರುವುದು ಒಳ್ಳೆಯ ಸಂಗತಿ. ಇದರಿಂದ  ಸಮಸ್ಯೆಗಳು ಎದುರಾಗದಂತೆ ನೋಡಿಕೊಳ್ಳಿ. ಮಳೆಯಿಂದ ಜನರಿಗೆ ಯಾವ ಭಾಗದಲ್ಲೂ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ ಸಂಬಂಧ ಚರ್ಚೆ ನಡೆಸಲು ಪಕ್ಷದ ಹೈಕಮಾಂಡ್ ಆಹ್ವಾನ ನೀಡಿದ್ದು, ಈ ಹಿನ್ನೆಲೆಯಲ್ಲಿ ತಾವು ಮತ್ತು ಕೆಪಿಸಿಸಿ ಅಧ್ಯಕ್ಷರಾಗಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಇಂದು ಸಂಜೆ ದೆಹಲಿಗೆ ತೆರಳಿ ಈ ಸಂಬಂಧ ಚರ್ಚೆ ನಡೆಸಲಾಗುವುದು ಎಂದರು.

ಕೆಪಿಸಿಸಿ ಅಧ್ಯಕ್ಷರ ನೇಮಕ ಸಂಬಂಧ ಈಗಾಗಲೇ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಈ ತಿಂಗಳಾದ್ಯಂತದಲ್ಲಿ ಖಚಿತವಾಗಿ ಹೇಳುತ್ತೇನೆ ಎಂದು ಹೇಳಿದ್ದಾರೆ. ಹೀಗಾಗಿ ತಾವು ಈ ಬಗ್ಗೆ ಹೆಚ್ಚಿಗೆ ಹೇಳುವುದು ಏನೂ ಇಲ್ಲ. ಹೈಕಮಾಂಡ್ ಜತೆ ಚರ್ಚಿಸಿದ ನಂತರ ಮುಂದಿನ ಅಧ್ಯಕ್ಷರು ಯಾರಾಗಲಿದ್ದಾರೆ ಎನ್ನುವುದು ತಿಳಿಯಲಿದೆ ಎಂದು ಹೇಳಿದರು. – (ವರದಿ:ಕೆ.ಎಸ್,ಎಸ್.ಎಚ್)

Leave a Reply

comments

Related Articles

error: