ಮೈಸೂರು

ಸುಪ್ರೀಂ ತೀರ್ಪು ಖಂಡಿಸಿ ಕರುನಾಡು ಜನಶಕ್ತಿ ವೇದಿಕೆಯಿಂದ ಪ್ರತಿಭಟನೆ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸರ್ವೋಚ್ಚ ನ್ಯಾಯಾಲಯ ನೀಡಿರುವ ತೀರ್ಪನ್ನು ಖಂಡಿಸಿ ಕರುನಾಡು ಜನಶಕ್ತಿ ವೇದಿಕೆ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ನಗರದ ನ್ಯಾಯಾಲಯದ ಮುಂಭಾಗವಿರುವ ಗಾಂಧಿ ಪುತ್ಥಳಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಸರ್ವೋಚ್ಚ ನ್ಯಾಯಾಲಯ ರಾಜ್ಯದ ವಾಸ್ತವ ಸ್ಥಿತಿಯನ್ನು ಅರಿಯದೆ ಪದೇ ಪದೇ ತಮಿಳುನಾಡು ಪರವಾಗಿ ತೀರ್ಪು ನೀಡುತ್ತಿದೆ. ರಾಜ್ಯದಲ್ಲಿ ಕುಡಿಯುವ ನೀರಿಗೂ ಅಭಾವವಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುವಂತೆ ನ್ಯಾಯಾಲಯ ನೀಡಿರುವ ತೀರ್ಪು ರಾಜ್ಯದ ಜನತೆಯ ಪಾಲಿಗೆ ಮರಣ ಶಾಸನವಾಗಿದೆ. ರಾಜ್ಯ ಸರ್ಕಾರವೂ ಕೂಡ ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದು ರೈತರಿಗೆ ಭರವಸೆ ನೀಡಿ ಇದೀಗ ತಮಿಳುನಾಡಿಗೆ ನೀರು ಬಿಡುತ್ತಿದೆ. ಇದು ಸರ್ಕಾರ ರಾಜ್ಯದ ರೈತರಿಗೆ ಮಾಡಿರುವ ಅನ್ಯಾಯ ಎಂದು ಪ್ರತಿಭಟನಾನಿರತರು ಆರೋಪಿಸಿದರು.

ವೇದಿಕೆಯ ಯತಿರಾಜ್, ರಾಚಪ್ಪ, ಗಿರೀಶ್, ಶ್ರೀರಾಮ್, ಪರಮೇಶ್, ರಾಜೇಂದ್ರ, ಜಿ.ಉಮೇಶ್, ಉಮೇಶ್, ಮಹೇಶ್, ವಸಂತ್, ನಾಗರಾಜ್, ಮಹಿಳಾ ಘಟಕದ ಲಕ್ಷ್ಮೀ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Leave a Reply

comments

Related Articles

error: