ಮೈಸೂರು

ಮೂಲ ಸೌಕರ್ಯ ಮತ್ತು ಸಮಾಜ ಕಲ್ಯಾಣ ಇಲಾಖೆ ನಿರ್ಲಕ್ಷ್ಯದ ವಿರುದ್ಧ ವಿದ್ಯಾರ್ಥಿಗಳು ಗರಂ

ಮೂಲ ಸೌಕರ್ಯ ಮತ್ತು ಸಮಾಜ ಕಲ್ಯಾಣ ಇಲಾಖೆ ನಿರ್ಲಕ್ಷ್ಯದ ವಿರುದ್ಧ ಶಾಂತವೇರಿ ಗೋಪಾಲ ಗೌಡ ನಗರದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ 2೦೦ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಹಾಸ್ಟೆಲ್‌ನಲ್ಲಿ ವಿದ್ಯುತ್ ಕೊರತೆ, ಕುಡಿಯುವ ನೀರು, ಕಳಪೆ ಗುಣಮಟ್ಟದ ಆಹಾರ, ಶೌಚಾಲಯ ಸಮಸ್ಯೆಗಳು ಸೇರಿದಂತೆ ಹಲವಾರು ಸಮಸ್ಯೆಗಳಿದ್ದು ಅಧಿಕಾರಿಗಳಿಗೆ ದೂರು ಸಲ್ಲಿಸಿದಾಗ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆದರೆ ಸಮಸ್ಯೆ ಮಾತ್ರ ಪರಿಹಾರವಾಗಿಲ್ಲ. ಹಾಸ್ಟೆಲ್‌ನ ನಿಲಯ ಪಾಲಕರು ವಿದ್ಯಾರ್ಥಿಗಳೊಂದಿಗೆ ಅಸಭ್ಯವಾಗಿ ವರ್ತಿಸುವುದಲ್ಲದೆ ಬೆದರಿಕೆಗಳನ್ನು ಒಡ್ಡುತ್ತಿದ್ದಾರೆ. ಆದ್ದರಿಂದ ನಿಲಯ ಪಾಲಕರನ್ನು ಬದಲಾಯಿಸುವಂತೆ ಹಾಗೂ ನಿಲಯದ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಬೇಕೆಂದು  ವಿದ್ಯಾರ್ಥಿಗಳು ಒತ್ತಾಯಿಸಿ ಡಿ.ಎಸ್.ಡಬ್ಲ್ಯೂಗೆ ಮನವಿ ಪತ್ರ ಸಲ್ಲಿಸಿದರು.

ಬಿ.ವಿಎಸ್ ಅಧ್ಯಕ್ಷ  ಸಿದ್ದು, ಸುನಿಲ್, ಭೀಮ್‌ರಾವ್, ಜಿಲ್ಲಾಧ್ಯಕ್ಷ ನವೀನ್ ಮೌರ್ಯ, ಹರಿಶ್, ಅವಿನಾಶ್ ಇದ್ದರು.

Leave a Reply

comments

Related Articles

error: