ಕರ್ನಾಟಕಪ್ರಮುಖ ಸುದ್ದಿ

ಮಕ್ಕಳ ಭಿಕ್ಷಾಟನೆ ವಿರುದ್ಧ ಲೋಕಾಯುಕ್ತ ಸಂಸ್ಥೆ ಸ್ವಯಂ ದೂರು ದಾಖಲು

ಪ್ರಮುಖ ಸುದ್ದಿ, (ಬೆಂಗಳೂರು) ಮೇ 29: ಮಕ್ಕಳ ಭಿಕ್ಷಾಟನೆ ವಿರುದ್ಧ ಲೋಕಾಯುಕ್ತ ಸಂಸ್ಥೆ ಸ್ವಯಂ ದೂರು ದಾಖಲಿಸಿಕೊಂಡಿದೆ.

ಬೆಂಗಳೂರಿನ ಟ್ರಾಫಿಕ್ ಸಿಗ್ನಲ್, ಬಸ್ ನಿಲ್ದಾಣ,ರೈಲ್ವೆ ಸ್ಟೇಷನ್ ಸೇರಿದಂತೆ ಜನ ದಟ್ಟಣ ಪ್ರದೇಶಗಳಲ್ಲಿ  ಮಕ್ಕಳ ಭಿಕ್ಷಾಟನೆ ಹೆಚ್ಚಾಗಿದ್ದು, ಅದೇ ಮಕ್ಕಳು ಕೆಲವು ಮಾದಕ ವಸ್ತುಗಳನ್ನುನ ಸಹ ಮಾರಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಲೋಕಾಯುಕ್ತ ಸಂಸ್ಥೆ ದೂರು ದಾಖಲಿಸಿಕೊಂಡಿದೆ.

ಮಕ್ಕಳ ಭಿಕ್ಷಾಟನೆ ಮತ್ತು ಮಕ್ಕಳ ಕಳ್ಳಸಾಗಾಣಿಕೆ ವಿರುದ್ಧ ಕೈಗೊಂಡಿರುವ ಕ್ರಮದ ಬಗ್ಗೆ ಒಂದು ತಿಂಗಳಲ್ಲಿ ವರದಿ ಕೊಡುವಂತೆ  ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಸೂಚನೆ ನೀಡಿದ್ದಾರೆ. ರಾಜ್ಯ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ, ಡಿಜಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಸೇರಿದಂತೆ ಉನ್ನತ ಅಧಿಕಾರಿಗಳಿಗೆ ನೋಟಿಸ್ ನೀಡಿದ್ದಾರೆ. ಮಕ್ಕಳ ಭಿಕ್ಷಾಟನೆಯಲ್ಲಿ ವ್ಯವಸ್ಥಿತ ಜಾಲವಿರುವ ಬಗ್ಗೆ ಲೋಕಾಯುಕ್ತ ಶಂಕೆ ವ್ಯಕ್ತಪಡಿಸಿರುವ ಹಿನ್ನೆಲೆ ಇದರ ವ್ಯವಸ್ಥಿತ ಜಾಲವನ್ನು ಪತ್ತೆ ಹಚ್ಚಿ ಎಂದು ಅಧಿಕಾರಿಗಳಿಗೆ ನ್ಯಾ. ವಿಶ್ವನಾಥ್ ಶೆಟ್ಟಿ ನಿರ್ದೇಶಿಸಿದ್ದಾರೆ. (ವರದಿ: ಎಸ್.ಎನ್,ಎಲ್.ಜಿ)

Leave a Reply

comments

Related Articles

error: