ಸುದ್ದಿ ಸಂಕ್ಷಿಪ್ತ

ಪುಸ್ತಕ ಬಿಡುಗಡೆ ಕಾರ್ಯಕ್ರಮ, ಸಂವಾದ ಹಾಗೂ ಲೇಖನ ಪ್ರಶಸ್ತಿ ಪ್ರದಾನ ಸಮಾರಂಭ: ಜೂನ್ 18 ರಂದು

ಮೈಸೂರು, ಮೇ 29: ದೇಸಿರಂಗ ಸಾಂಸ್ಕೃತಿಕ ಸಂಸ್ಥೆಯು ಡಾ.ರಾಮಮನೋಹರ ಲೋಹಿಯಾ ಟ್ರಸ್ಟ್ ನ ಸಹಯೋಗದಲ್ಲಿ ಜೂನ್ 18 ರಂದು ಬೆ.10.30 ಕ್ಕೆ ಕಲಾಮಂದಿರದ ಮನೆಯಂಗಳದಲ್ಲಿ ‘ವಿಚಾರವಾದಿ, ಪ್ರಗತಿಪರ ಚಿಂತಕ ಪ್ರೊ.ಕೆ.ರಾಮದಾಸ ನೆನಪಿರಲಿ…’ ಪುಸ್ತಕ ಬಿಡುಗಡೆ ಕಾರ್ಯಕ್ರಮ, ಸಂವಾದ ಹಾಗೂ ಲೇಖನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ದೆಹಲಿಯ ‘ಔಟ್ ಲುಕ್’ ಪತ್ರಿಕೆಯ ಹಿರಿಯ ಪತ್ರಕರ್ತ ಕೃಷ್ಣ ಪ್ರಸಾದ್ ನೆರವೇರಿಸಲಿದ್ದಾರೆ. (ಎಲ್.ಜಿ)

Leave a Reply

comments

Related Articles

error: