ಕರ್ನಾಟಕ

ಕೂಟುಹೊಳೆಯಲ್ಲಿ ಹೂಳೆತ್ತುವ ಕಾಮಗಾರಿ : ಶೀಘ್ರ ಪೂರ್ಣಗೊಳಿಸಲು ಸೂಚನೆ

ರಾಜ್ಯ(ಮಡಿಕೇರಿ)ಮೇ.29:-  : ನಗರದ ಬಹುತೇಕ ಭಾಗಕ್ಕೆ ಕುಡಿಯುವ ನೀರನ್ನು ಒದಗಿಸುವ ಕೂಟುಹೊಳೆಯಲ್ಲಿ ಹೂಳೆತ್ತುವ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸೋಮವಾರ ನಗರದ ಹೊರವಲಯದ ಕೂಟುಹೊಳೆಗೆ ಭೇಟಿ ನೀಡಿ ಅವರು ಪರಿಶೀಲಿಸಿದರು. ಕಳೆದ ಅನೇಕ ವರ್ಷಗಳಿಂದ ಹೂಳೆತ್ತದೆ ನಿರ್ಲಕ್ಷ್ಯಿಸಲ್ಪಟ್ಟಿದ್ದ ಕೂಟುಹೊಳೆಗೆ ಕಾಯಕಲ್ಪ ನೀಡಲಾಗುತ್ತಿದ್ದು, ನೀರಿನ ಸಂಗ್ರಹಣಾ ಸಾಮರ್ಥ್ಯವನ್ನು ಹೆಚ್ಚಿಸಲಾಗುತ್ತಿದೆ ಎಂದರು. (ವರದಿ:ಕೆಸಿಐ,ಎಸ್.ಎಚ್)

Leave a Reply

comments

Related Articles

error: