ಪ್ರಮುಖ ಸುದ್ದಿಮೈಸೂರು

ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಸಂಘಟಿತರಾಗಿ ಕೆಲಸ ಮಾಡಬೇಕು :ಆರ್.ಅಶೋಕ್

ಪ್ರಮುಖಸುದ್ದಿ,ಮೈಸೂರು, ಮೇ 31:- ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಸಂಘಟಿತರಾಗಿ ಕೆಲಸ ಮಾಡಬೇಕು. ಕೇಂದ್ರ ಸರ್ಕಾರದ ಸಾಧನೆಯನ್ನು ಸಾರ್ವಜನಿಕರಿಗೆ ಮನವರಿಕೆ ಮಾಡಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ತಿಳಿಸಿದರು.
ಬುಧವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಬಿಜೆಪಿಯ ಪ್ರಮುಖ ನಾಯಕರ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ನಮ್ಮ ಪಕ್ಷ ಉತ್ತಮ ಆಡಳಿತ ನೀಡುತ್ತಿದೆ. ನಮ್ಮ ಸರ್ಕಾರ ಎಲ್ಲಾ ಸಾಧನೆಗಳನ್ನು ಜನರ ಬಳಿಗೆ ಕೊಂಡೊಯ್ಯುವ ಮೂಲಕ ಚುನಾವಣೆ ಎದುರಿಸಬೇಕು. ಹಿರಿಯರು ನೀಡುವ ಸೂಚನೆಯನ್ನು ಪ್ರತಿಯೊಬ್ಬ ಕಾರ್ಯಕರ್ತನೂ ಪಾಲಿಸುವ ಮೂಲಕ ಕಾರ್ಯರೂಪಕ್ಕೆ ತರಬೇಕು. ಚುನಾವಣೆಗೆ ವರ್ಷವಷ್ಟೇ ಬಾಕಿಯಿದ್ದು ಕಾರ್ಯಕರ್ತರ ಪಡೆ ಕಟ್ಟಬೇಕು. ಪಕ್ಷದ ಪ್ರತಿಯೊಬ್ಬರಿಗೂ ಒಂದಲ್ಲಾ ಒಂದು ಜವಾಬ್ದಾರಿ ನೀಡಿದ್ದು ನನಗೆ ಮೈಸೂರು ಹಾಗೂ ಮಂಡ್ಯ ಜಿಲ್ಲೆಯ ಉಸ್ತುವಾರಿ ವಹಿಸಲಾಗಿದೆ. ಟಿಕೆಟ್ ಆಕಾಂಕ್ಷಿಗಳು ಹೆಚ್ಚು ಕೆಲಸ ಮಾಡಿದ್ದರೆ ಮಾತ್ರ ಅವರ ಅರ್ಜಿಯನ್ನು ಪರಿಗಣಿಸಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಸಂಸದ ಪ್ರತಾಪಸಿಂಹ, ಮಾಜಿ ಸಚಿವ ಎಸ್.ಎ.ರಾಮದಾಸ್, ಉಪ ಮೇಯರ್ ರತ್ನಾಲಕ್ಷ್ಮಣ್, ನಗರಾಧ್ಯಕ್ಷ ಡಾ.ಬಿ.ಎಚ್.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಎನ್.ಸತೀಶ್, ನಂದೀಶ್ ಪ್ರೀತಂ, ಎಚ್.ವಿ.ರಾಜೀವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ,ಎಸ್.ಎಚ್)

Leave a Reply

comments

Related Articles

error: