ಪ್ರಮುಖ ಸುದ್ದಿಮೈಸೂರು

ಸಚಿವ ಆಂಜನೇಯರಿಂದ ಸಾಧನಾ ಸಮಾವೇಶ ನಡೆಯುವ ಸ್ಥಳ ಪರಿಶೀಲನೆ

ಮೈಸೂರು, ಮೇ 31:- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ನಾಲ್ಕು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಜೂ.3ರಂದು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಸಾಧನ ಸಮಾವೇಶ ಹಾಗೂ ಸವಲತ್ತು ವಿತರಣಾ ಸಮಾವೇಶವನ್ನು ಹಮ್ಮಿಕೊಂಡಿದ್ದು ಸಮಾಜ ಕಲ್ಯಾಣ ಇಲಾಖೆ ಸಚಿವ ಆಂಜನೇಯ ಬುಧವಾರ ಮೈದಾನಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.
ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ ಅವರು, ವೇದಿಕೆಯನ್ನು ಯಾವುದೇ ತೊಂದರೆಯಾಗದಂತೆ ಸಿದ್ಧಪಡಿಸುವಂತೆ ಸೂಚಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನೂರಾರು ಜನಪರ ಕಾರ್ಯಕ್ರಮಗಳನ್ನು ನೀಡಿದೆ. ಚುನಾವಣೆ ಸಂದರ್ಭದಲ್ಲಿ ನೀಡಿದ್ದ 150ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸಿದೆ. ನನ್ನ ಇಲಾಖೆಯಲ್ಲಿ ಹೆಚ್ಚು ವಸತಿ ನಿಲಯಗಳನ್ನು ನಿರ್ಮಿಸಿವೆ. ಅಲ್ಲದೆ ಸುಮಾರು 27 ಸಾವಿರ ಕೋಟಿ ಅನುದಾನ ನೀಡಲಾಗಿದೆ.  ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಧ್ಯೇಯವಾಕ್ಯದಡಿ ಕಾರ್ಯ ನಿರ್ವಹಿಸುತ್ತಿದ್ದು, ಈ ಬಾರಿಯೂ ಮತದಾರರು ಪಕ್ಷವನ್ನು ಬೆಂಬಲಿಸಲಿದ್ದಾರೆ. ಅಲ್ಲದೆ ದಲಿತರಿಗೆ ರಾಜ್ಯಾಧ್ಯಕ್ಷ ಪಟ್ಟ ನೀಡಿರುವ ಏಕೈಕ ಪಕ್ಷ ಕಾಂಗ್ರೆಸ್ ಆಗಿರುವುದರಿಂದ ಮತದಾರರು ನಮ್ಮ ಕೈಬಿಡುವುದಿಲ್ಲ ಎಂದ ಅವರು, ಗೋಹತ್ಯೆ ನಿಷೇಧ ಕಾಯ್ದೆ ಕೇಂದ್ರದ ದ್ವಂದ್ವ ನಿಲುವಾಗಿದ್ದು, ಆಹಾರದ ಹಕ್ಕನ್ನು ಯಾರೂ ಕಸಿದುಕೊಳ್ಳಬಾರದು ಎಂದು ಹೇಳಿದರು.
ಈ ವೇಳೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. (ವರದಿ ಬಿ.ಎಂ,ಎಸ್.ಎಚ್)

Leave a Reply

comments

Related Articles

error: