ಕರ್ನಾಟಕಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿತ: ಇಬ್ಬರ ದುರ್ಮರಣ

ಬೆಂಗಳೂರು: ಬೆಳ್ಳಂದೂರು ಗೇಟ್‍ ಬಳಿ ನಿರ್ಮಾಣ ಹಂತದಲ್ಲಿದ್ದ 5 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ನಾಲ್ವರನ್ನು ರಕ್ಷಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಿಲಾಗಿದೆ. ಇನ್ನು, ಎಂಟರಿಂದ ಹತ್ತು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಮಧ್ಯಾಹ್ನ 1 ಗಂಟೆ ಸುಮಾರಿಗೆ ನಿರ್ಮಾಣ ಹಂತದಲ್ಲಿ ಕಟ್ಟಡ ಕುಸಿದು ಬಿದ್ದಿದೆ. ಘಟನಾ ಸ್ಥಳಕ್ಕೆ 5 ಅಗ್ನಿಶಾಮಕ ದಳ ವಾಹನ ಆಗಮಿಸಿದ್ದು, ಅವಶೇಷಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಭರದಿಂದ ಸಾಗಿದೆ.

2 ಮಹಡಿ ಕಟ್ಟಡ ಕಟ್ಟಲು ಅನುಮತಿ ಪಡೆದು 5 ಮಹಡಿ ನಿರ್ಮಿಸಲಾಗುತ್ತಿದ್ದು ಈ ಬಗ್ಗೆ ಮೇಯರ್‍ಗೆ ಈಗಾಗಲೇ ದೂರು ನೀಡಿದ್ದೆ. ಇಂದು ಬೆಳಗ್ಗೆ ಕೂಡ ಈ ಕಟ್ಟಡ ಬಳಿ ಹೋಗಿದ್ದೆ ಎಂದು ವಿಧಾನಸಭಾ ಸದಸ್ಯ ರಘು ಆಚಾರ್ ತಿಳಿಸಿದ್ದಾರೆ.

Leave a Reply

comments

Related Articles

error: