ಮೈಸೂರು

ರಾಜ್ಯಕ್ಕೆ ಮೈಸೂರು ರಾಜರ ಕೊಡುಗೆ ಅಪಾರ : ಸಿಎಂ ಸಿದ್ದರಾಮಯ್ಯ

ಮೈಸೂರು,ಜೂ.4:- ನಾಲ್ವಡಿ ಕೃಷ್ಣರಾಜ ಒಡೆಯರ್  ಜನ್ಮ ದಿನಾಚರಣೆ ಪ್ರಯುಕ್ತ ಮೈಸೂರಿನ ಕೆ.ಆರ್.ವೃತ್ತದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಮರ್ಪಿಸಿದರು.

ಬಳಿಕ ಮಾತನಾಡಿದ ಅವರು ರಾಜ್ಯಕ್ಕೆ ಮೈಸೂರು ರಾಜರ ಕೊಡುಗೆ ಅಪಾರ ಎಂದು ಮೈಸೂರು ರಾಜರ ಕೊಡುಗೆಯನ್ನು ಸ್ಮರಿಸಿದರು. ಅವರ ಆದರ್ಶಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ನಾಲ್ವಡಿ ಕೃಷ್ಣರಾಜ ಒಡೆಯರ್ ದಿನಾಚರಣೆಯ ಸಂದರ್ಭದಲ್ಲಿ ಮೈಸೂರಿನಲ್ಲಿಯೇ ನಾನಿರುವುದು ಖುಷಿ ತಂದಿದೆ ಎಂದರು. ಈ ಸಂದರ್ಭ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಶಾಸಕರಾದ ಎಂ.ಕೆ.ಸೋಮಶೇಖರ್, ಪಿ.ವಾಸು, ಸಂಸದ ಧ್ರಯವ ನಾರಾಯಣ ಮತ್ತಿತರರು ಉಪಸ್ಥಿತರಿದ್ದರು. (ವರದಿ:ಕೆ.ಎಸ್,ಎಸ್.ಎಚ್)

Leave a Reply

comments

Related Articles

error: