
ಕರ್ನಾಟಕಪ್ರಮುಖ ಸುದ್ದಿಮೈಸೂರು
ಪಾಲಿಟೆಕ್ನಿಕ್ ಡಿಪ್ಲೋಮಾ ಕೋರ್ಸುಗಳ ಪ್ರವೇಶಕ್ಕೆ ಅವಧಿ ವಿಸ್ತರಣೆ
ಬೆಂಗಳೂರು, ಜೂನ್ 5 : 2017-18ನೇ ಸಾಲಿಗೆ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್ಗಳಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸುಗಳ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಒಟ್ಟಾರೆ ಶೇ.35 ಅಂಕಗಳನ್ನು ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿಕೊಳ್ಳಲು ಮತ್ತು ಸ್ವೀಕರಿಸಲು ಜೂನ್ 7 ರವರೆಗೆ ಅವಧಿ ವಿಸ್ತರಿಸಲಾಗಿದೆ.
ಈ ಮೊದಲು ಅಂತಿಮ ದಿನಾಂಕವನ್ನು ಜೂನ್ 5 ಎಂದು ನಿಗದಿಪಡಿಸಲಾಗಿತ್ತು. ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಸಾರ್ವಜನಿಕ ಹಿತದೃಷ್ಟಿಯ ಮೇರೆಗೆ ಅರ್ಹ ಅಭ್ಯರ್ಥಿಗಳು ವೆಬ್ಸೈಟ್ನಿಂದ ಅರ್ಜಿ ಪಡೆಯಲು, ಭರ್ತಿ ಮಾಡಿದ ಅರ್ಜಿಯನ್ನು ಮೂಲ ದಾಖಲೆಗಳ ಪರಿಶೀಲನೆಯೊಂದಿಗೆ ರಾಜ್ಯದಲ್ಲಿನ 121 ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ “ದಾಖಲೆ ಪರಿಶೀಲನೆ ಹಾಗೂ ಆನ್ಲೈನ್ ಅರ್ಜಿ ಸಲ್ಲಿಕೆ ಕೇಂದ್ರ” ಗಳಲ್ಲಿ ಆನ್ಲೈನ್ನಲ್ಲಿ ಸಲ್ಲಿಸಲು ಜೂನ್ 7 ರ ಸಂಜೆ 5 ಗಂಟೆವರೆಗೆ ಅವಧಿ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ತಾಂತ್ರಿಕ ಶಿಕ್ಷಣ ಇಲಾಖೆಯ ವೆಬ್ಸೈಟ್ www.dte.kar.nic.in ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ www.kea.kar.nic.in ನೋಡಬಹುದು.
-ಎನ್.ಬಿ.ಎನ್.