ಸುದ್ದಿ ಸಂಕ್ಷಿಪ್ತ

ಅಹವಾಲು ಸ್ವೀಕಾರ

ಮಡಿಕೇರಿ, ಜೂ.5 : ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳು ಹಾಗೂ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ಸಭೆಯು ಜೂ. 9 ರಂದು ಬೆಳಗ್ಗೆ 11 ಗಂಟೆಗೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸುಂಟಿಕೊಪ್ಪ ಪ್ರವಾಸಿ ಮಂದಿರದಲ್ಲಿ, ಜೂ.13 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಭಾಗಮಂಡಲ ಪ್ರವಾಸಿ ಮಂದಿರದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಮಡಿಕೇರಿ ಪೊಲೀಸ್ ಠಾಣಾ ವತಿಯಿಂದ ನಡೆಯಲಿದೆ.

ಹೆಚ್ಚಿನ ಮಾಹಿತಿಗೆ ಭ್ರಷ್ಟಾಚಾರ ನಿಗ್ರಹ ದಳ, ಪೊಲೀಸ್ ಠಾಣೆ, ಶಾಂತಿ ನಿಲಯ, ಕಾನ್ವೆಂಟ್ ಜಂಕ್ಷನ್, ಮಡಿಕೇರಿ. 571201, ದೂರವಾಣಿ ಸಂಖ್ಯೆ: 08272-222100, 9480806225 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ಪೊಲೀಸ್ ಠಾಣೆಯ ಭ್ರಷ್ಟಾಚಾರ ನಿಗ್ರಹದಳದ ರಾಣಾಧಿಕಾರಿ ಹಾಗೂ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.(ವರದಿ: ಕೆಸಿಐ, ಎಲ್.ಜಿ)

Leave a Reply

comments

Related Articles

error: