ಸುದ್ದಿ ಸಂಕ್ಷಿಪ್ತ

ಲಯನ್ಸ್ ಶತಮಾನೋತ್ಸವ ಸಂಭ್ರಮ : ಕಣ್ಣಿನ ತಪಾಸಣೆ ಹಾಗೂ ಪ್ರತಿಭಾ ಪುರಸ್ಕಾರ

ಮೈಸೂರು.ಜೂ.6 : ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆಯ ಶತಮಾನೋತ್ಸವ ಸಂಭ್ರಮದ ಪ್ರಯುಕ್ತ ಜೂ.7ರಂದು ಬೆಳಿಗ್ಗೆ 10ಕ್ಕೆ ವಿಶ್ವಮಾನವ ಜೋಡಿ ರಸ್ತೆಯಲ್ಲಿರುವ ನಾಗರಿಕ ವೇದಿಕೆ ಪೂರ್ಣ ಪ್ರಜ್ಞ ವಿದ್ಯಾಶಾಲೆಯ ಆವರಣದಲ್ಲಿ ಅನ್ನಪೂರ್ಣ ಕಣ್ಣಿನ ಆಸ್ಪತ್ರೆ ಹಾಗೂ ನಾಗರಿಕ ವೇದಿಕೆ ಸಹಯೋಗದೊಂದಿಗೆ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಹಾಗೂ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿದೆ.

ಮುಖ್ಯ ಅತಿಥಿಗಳಾಗಿ ನಾಗರಾಜ್ ವಿ.ಬೇರಿ, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ದೀಪಕ್, ಕಸಾಪ ಜಿಲ್ಲಾಧ್ಯಕ್ಷ ಡಾ.ವೈ.ಡಿ.ರಾಜಣ್ಣ ಇತರರು ಪಾಲ್ಗೊಳ್ಳುವರು. (ಕೆ.ಎಂ.ಆರ್)

Leave a Reply

comments

Related Articles

error: