ಸುದ್ದಿ ಸಂಕ್ಷಿಪ್ತ

ಜೂ.11ಕ್ಕೆ ಸಪ್ತಪದಿ ಕಲ್ಯಾಣ ಮಂಟಪ ಲೋಕಾರ್ಪಣೆ

ಮೈಸೂರು.ಜೂ.7 : ಚನ್ನಕೇಶವ ಚಾರಿಟಬಲ್ ಟ್ರಸ್ಟ್ ನ ವಿಜಯನಗರ ಒಂದನೇ ಹಂತದಲ್ಲಿ ನೂತನವಾಗಿ ನಿರ್ಮಿಸಲಾದ ಸಪ್ತಪದಿ ಕಲ್ಯಾಣ ಮಂಟಪವನ್ನು ಜೂ11ರಂದು ಬೆಳಿಗ್ಗೆ 11.30ಕ್ಕೆ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಸುತ್ತೂರು ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹಾಗೂ ನಿರ್ಮಲನಂದನಾಥ ಸ್ವಾಮಿಗಳು ಸಾನಿಧ್ಯದಲ್ಲಿ ಲೋಕಾರ್ಪಣೆಗೊಳ್ಳುವುದು,  ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಹೆಚ್.ಡಿ.ಕುಮಾರಸ್ವಾಮಿ, ಸಚಿವರಾದ ಡಾ.ಹೆಚ್.ಡಿ.ಮಹದೇವಪ್ಪ, ತನ್ವೀರ್ ಸೇಠ್ ಶಾಸಕ ವಾಸು ಹಾಗೂ ಸಂಸದ ಪ್ರತಾಪ್ ಸಿಂಹ, ಮೂಡಾ ಅಧ್ಯಕ್ಷ ಧ್ರುವಕುಮಾರ್ ಮೇಯರ್ ಎಂ.ಜೆ.ರವಿಕುಮಾರ್ ಹಾಗೂ ಇತರರು ಪಾಲ್ಗೊಳ್ಳುವರು. (ಕೆ.ಎಂ.ಆರ್)

Leave a Reply

comments

Related Articles

error: