ಸುದ್ದಿ ಸಂಕ್ಷಿಪ್ತ

ರಂಗಶಿಕ್ಷಣ ಡಿಪ್ಲೋಮಾಗೆ ಅರ್ಜಿ ಆಹ್ವಾನ

ಮಡಿಕೇರಿ ಜೂ.7:-ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ರಂಗಶಿಕ್ಷಣ ಡಿಪ್ಲೋಮಾಕ್ಕೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಶಿಕ್ಷಣದ ಅವಧಿ ಒಂದು ವರ್ಷ. ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ.ಆಗಿದ್ದು, ಪದವೀಧರರಿಗೆ ಆದ್ಯತೆ. ತರಬೇತಿ ಅವಧಿಯಲ್ಲಿ ಊಟ ಮತ್ತು ವಸತಿ ವ್ಯವಸ್ಥೆ ನೀಡಲಾಗುತ್ತಿದೆ. ಕರ್ನಾಟಕ ಹಾಗೂ ಭಾರತದ ರಂಗತಜ್ಞರು ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ.ಒಂದು ವರ್ಷದಲ್ಲಿ  ಭಾರತೀಯ ರಂಗಭೂಮಿ, ಕನ್ನಡ ರಂಗಭೂಮಿ  ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಅಭಿನಯ ಮತ್ತು ಶಿಕ್ಷಣದಲ್ಲಿ ರಂಗಭೂಮಿ ಕುರಿತಾದ ಸೈದ್ಧಾಂತಿಕ ಮತ್ತು  ಪ್ರಾಯೋಗಿಕ ತರಗತಿಗಳು ನಡೆಯುತ್ತವೆ. ಕಳರಿ, ಯೋಗ, ಕಥಕ್ಕಳಿ, ಯಕ್ಷಗಾನ, ಕಂಸಾಳೆ, ಹೆಜ್ಜೆಮೇಳ, ವೀರಗಾಸೆ, ಪ್ರಸಾಧನ, ಬೆಳಕಿನ ವಿನ್ಯಾಸ, ರಂಗವಿನ್ಯಾಸ, ವಸ್ತ್ರವಿನ್ಯಾಸ ಮುಂತಾದ ಕಾರ್ಯಾಗಾರಗಳು ಜೊತೆಗೆ ಕಾವ್ಯ, ಸಿನಿಮಾ, ಚಿತ್ರಕಲೆ ಕುರಿತಾದ ಕಮ್ಮಟಗಳು ನಡೆಯುತ್ತವೆ. ಒಂದು ವರ್ಷದಲ್ಲಿ ನಾಲ್ಕರಿಂದ ಐದು ನಾಟಕಗಳ ಅಭ್ಯಾಸ ಪ್ರದರ್ಶನ ನಡೆಯುತ್ತವೆ.

ಆಸಕ್ತರು ಪ್ರಾಚಾರ್ಯರು, ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆ, ಸಾಣೇ ಹಳ್ಳಿ-577515, ಹೊಸದುರ್ಗ ತಾಲೂಕು, ಚಿತ್ರದುರ್ಗ ಜಿಲ್ಲೆ, ಈ ವಿಳಾಸಕ್ಕೆ ಬರೆದು ಪ್ರವೇಶ ಅರ್ಜಿ ಪಡೆಯಬಹುದು. ಪ್ರವೇಶ ಅರ್ಜಿಯನ್ನು ಡೌನ್‍ಲೋಡ್ ಮಾಡಿ ಜೂನ್ ತಿಂಗಳೊಳಗಾಗಿ ಅರ್ಜಿಯನ್ನು ರಂಗಶಾಲೆಗೆ ಸಲ್ಲಿಸುವುದು. ಜೂನ್, 27 ಮತ್ತು 28 ರಂದು ಸಂದರ್ಶನ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಜುಲೈ, 15 ರಿಂದ ತರಗತಿಗಳು ಪ್ರಾರಂಭವಾಗುತ್ತದೆ. ರಂಗ ಶಿಕ್ಷಣದ ಎರಡನೇಯ ವರ್ಷದ ಮುಂದುವರಿಕೆಯ ಹಂತವಾಗಿ ಒಂದು ವರ್ಷದ ಶಿವ ಸಂಚಾರದ ತಿರುಗಾಟದಲ್ಲಿ ಪಾಲ್ಗೊಳ್ಳುವುದು ಕಡ್ಡಾಯವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ದೂ.ಸಂ: 08199-243772, 9448398144, 9482942394 ನ್ನು ಸಂಪರ್ಕಿಸಬಹುದು ಎಂದು ಪ್ರಾಚಾರ್ಯರಾದ ಆರ್.ಜಗದೀಶ್ ಅವರು ತಿಳಿಸಿದ್ದಾರೆ. (ವರದಿ:ಕೆಸಿಐ,ಎಸ್.ಎಚ್)

Leave a Reply

comments

Related Articles

error: