ಮೈಸೂರು

ಸಂವಿಧಾನವನ್ನುಗಟ್ಟಿಗೊಳಿಸುವ ಕೆಲಸ ಮಾಡಬೇಕು: ಸಿ.ಕೆ.ಎನ್.ರಾಜಾ

ಮೈಸೂರು, ಜೂ.೭: ದೇಶದ ಆಡಳಿತ ಚುಕ್ಕಾಣಿ ಹಿಡಿದವರು ತಮ್ಮ ಸ್ವಹಿತಕ್ಕಾಗಿ ಸಂವಿಧಾನವನ್ನು ಬದಲಿಸುವ ತಮ್ಮ ಆಸಕ್ತಿಯನ್ನು ತೂರಿಸುವ ಕೆಲಸ ಮಾಡುತ್ತಿದ್ದು, ನಾವುಗಳು ಎಚ್ಚೆತ್ತುಕೊಂಡು ಸಂವಿಧಾನವನ್ನು ಗಟ್ಟಿಗೊಳಿಸುವ ಕೆಲಸ ಮಾಡಬೇಕು ಎಂದು ಸಂವಿಧಾನ ತಜ್ಞ ಡಾ.ಸಿ.ಕೆ.ಎನ್ ರಾಜಾ ಅಭಿಪ್ರಾಯಪಟ್ಟರು.
ಬುಧವಾರ ನಗರದ ಗೋವರ್ಧನ್ ಹೋಟೆಲ್ ಸಭಾಂಗಣದಲ್ಲಿ ಅಭಿವ್ಯಕ್ತಿ ಸ್ವಾತಂತ್ರಕ್ಕಾಗಿ ಜನ ಸಂಘಟನೆ ವತಿಯಿಂದ ಆಯೋಜಿಸಿದ್ದ ಸಂವಿಧಾನ ಉಳಿಸಲು ರಾಜ್ಯ ಮಟ್ಟದ ದೇಶಪ್ರೇಮಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿಶ್ವದ ಇತರ ರಾಷ್ಟ್ರಗಳಿಗೆ ಹೋಲಿಸಿದರೆ ನಮ್ಮ ದೇಶದ ಸಂವಿಧಾನ ಉತ್ತಮ ಅಂಶಗಳನ್ನು ಹೊಂದಿದ್ದು, ಅವುಗಳನ್ನು ಸರಿಯಾಗಿ ಅನುಷ್ಠಾನಗೊಳಿಸಬೇಕಿದೆ. ಆಡಳಿತ ವರ್ಗಗಳು ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ನಡೆದುಕೊಂಡಾಗ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢವಾಗುತ್ತದೆ. ಹಾಗಾಗಿ ಪ್ರತಿಯೊಬ್ಬರೂ ಸಂವಿಧಾನದ ಆಶಯಗಳಿಗೆ ಬದ್ಧವಾಗಿ ನಡೆದುಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ, ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಾಗಿ ಜನ ಸಂಘಟನೆ ಸಂಚಾಲಕ ಎಸ್.ಬಿ.ಬಲರಾಂ, ಕಾರ್ಮಿಕ ಮುಖಂಡ ಬಾಲಾಜಿರಾವ್, ಕೆ. ಬಸವರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: