ಮೈಸೂರು

ಜ್ವರದಿಂದ ಬಾಲಕಿ ಸಾವು

ಮೈಸೂರು,ಜೂ.8:- ಜ್ವರದಿಂದ ಬಳಲುತ್ತಿದ್ದ ಬಾಲಕಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ  ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಮಾದರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ಮಾದರಹಳ್ಳಿ ಗ್ರಾಮದ ಚೌಡೇಗೌಡ, ಲಕ್ಷ್ಮೀ ಎಂಬವರ ಮಗಳು  ಪೂರ್ವಿ(13) ಎಂದು ಗುರುತಿಸಲಾಗಿದೆ.ಈಕೆಗೆ ಮೂರು ದಿನದ ಹಿಂದೆ ಜ್ವರದಿಂದ ಕಾಣಿಸಿಕೊಂಡಿತ್ತು. ಕೆ.ಎಂ.ದೊಡ್ಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆ ನಂತರ ಸುಸ್ತಾಗಿ ಬಾಲಕಿ ಕೆಳಗೆ ಬಿದ್ದಿದ್ದಳು. ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಮೈಸೂರಿಗೆ ಕರೆದುಕೊಂಡು ಹೋಗಲಾಗಿತ್ತು. ಇದೀಗ  ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಮೃತಪಟ್ಟಿದ್ದಾಳೆ. (ವರದಿ:ಕೆ.ಎಸ್,ಎಸ್.ಎಚ್)

Leave a Reply

comments

Related Articles

error: