Uncategorizedಕರ್ನಾಟಕಮೈಸೂರು

ಮಹದಾಯಿ ಕುರಿತಂತೆ ಅಕ್ಟೋಬರ್ 21ಕ್ಕೆ ಮುಂಬೈನಲ್ಲಿ ಸಂಪುಟ ಸಭೆ ನಡೆಸಲಿದ್ದೇವೆ : ಸಿಎಂ

ಮಹದಾಯಿ ಯೋಜನೆಯ ಕುರಿತಂತೆ ಮಹಾರಾಷ್ಟ್ರ ಹಾಗೂ ಗೋವಾ ಮುಖ್ಯಮಂತ್ರಿಗಳ ಜೊತೆ ಸಂಪುಟ ಸಭೆ ನಡೆಸಿ ರೂಪುರೇಷೆಯನ್ನು ಸಿದ್ಧಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ತಿ.ನರಸೀಪುರದ ಮಿನಿವಿಧಾನ ಸೌಧ ಉದ್ಘಾಟನೆ ಮತ್ತು ವರುಣಾ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನೆಗೆ ಗುರುವಾರ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡಿದರು.

ಅಕ್ಟೋಬರ್ 21ರಂದು ಮುಂಬೈನಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ ಗೋವಾ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳು ಪಾಲ್ಗೊಳ್ಳಲಿದ್ದಾರೆ. ಮಹದಾಯಿ ಯೋಜನೆ ಕುರಿತು ಅವರಲ್ಲಿ ಚರ್ಚೆ ನಡೆಸಲಾಗುವುದು ಎಂದರು. ಅಷ್ಟೇ ಅಲ್ಲದೇ  ಗಡಿವಿವಾದ ಕುರಿತಂತೆಯೂ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೇಕೆದಾಟು ಯೋಜನೆ ರೂಪಿಸಲು ಸುಮಾರು 5.700ಕೋಟಿ ರೂ.ಗಳನ್ನು ಅಂದಾಜಿಸಲಾಗಿದೆ. ಈ ಯೋಜನೆ ಕಾರ್ಯರೂಪಕ್ಕೆ ಬಂದಲ್ಲಿ ಬೆಂಗಳೂರು ಹಾಗೂ ಸುತ್ತಮುತ್ತ ನೀರು ಮತ್ತು ವಿದ್ಯುತ್ತಿನ ಸಮಸ್ಯೆ ನೀಗಲಿದೆ ಎಂದರು. ಕಾವೇರಿ ನದಿ ನೀರು ಕುರಿತಂತೆ ವಾಸ್ತವಾಂಶ ತಿಳಿಯಲು ನಾಳೆ ಕೇಂದ್ರದಿಂದ ತಂಡ ಆಗಮಿಸಿ ಪರಿಶೀಲನೆ ನಡೆಸಲಿದೆ. ಈಗಾಗಲೇ ರೈತರ 51 ಎಕ್ರೆ ಕೃಷಿ ಭೂಮಿ ಒಣಗಿದೆ. ಕಳೆದ ವರ್ಷ 126 ಪ್ರದೇಶಗಳನ್ನು ಬರಪೀಡಿತ ಪ್ರದೇಶ ಎಂದು ಗುರುತಿಸಲಾಗಿತ್ತು. ಈ ಬಾರಿ 110 ಪ್ರದೇಶಗಳನ್ನು ಬರಪೀಡಿತ ಪ್ರದೇಶಗಳೆಂದು ಗುರುತಿಸಲಾಗಿದೆ. ಬರ ಪರಿಹಾರ ನೀಡುವಂತೆ ಕೇಂದ್ರವನ್ನು ಒತ್ತಾಯಿಸಲಾಗಿದೆ. ರೈತರು ಪಡೆದ ಸಾಲವನ್ನು ಮರುಪಾವತಿಸುವಂತೆ ರೈತರ ಮೇಲೆ ಒತ್ತಡ ಹೇರದಿರಲು ಬ್ಯಾಂಕ್ ನವರಿಗೆ ತಿಳಿಸಿದ್ದೇನೆ. ಈ ಕುರಿತು ಅವರೊಂದಿಗೆ ಸಭೆ ನಡೆಸಿದ್ದೇನೆ ಎಂದು ತಿಳಿಸಿದರು.

ರೈತರು ಯಾವುದೇ ಪರಿಸ್ಥಿತಿ ಬಂದರೂ ಎದುರಿಸಲು ಸಿದ್ಧರಾಗಿರಬೇಕು. ಆತ್ಮಹತ್ಯೆಗೆ ಮುಂದಾಗದೇ ಪರಿಸ್ಥಿತಿಯನ್ನು ಎದುರಿಸಿ. ನಿಮ್ಮೊಂದಿಗೆ ನಾವಿದ್ದೇವೆ ಎಂದರು. ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ,  ಸಚಿವ ಮಹದೇವಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

ಮರಿಗೌಡ ಪ್ರತ್ಯಕ್ಷ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಮಾಪ್ತನೆನಿಸಿಕೊಂಡ ಮರಿಗೌಡ ಗುರುವಾರ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷರಾಗಿದ್ದರು. ಮೈಸೂರಿನ ಹಿಂದಿನ ಜಿಲ್ಲಾಧಿಕಾರಿ ಶಿಖಾ ಅವರಿಗೆ ಧಮ್ಕಿ ಹಾಕಿದ ಪ್ರಕರಣದಿಂದ ಸುದ್ದಿಯಾಗಿದ್ದ ಮರಿಗೌಡನ ಕುರಿತು ಹಿಂದೆ ಮಾಧ್ಯಮದವರು ಪ್ರಶ್ನಿಸಿದಾಗ ಮರಿಗೌಡ ಯಾರೋ ಗೊತ್ತಿಲ್ಲ ಎಂದು ತಿಳಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಹಸನ್ಮುಖರಾಗಿ ಮರಿಗೌಡ  ನೀಡಿದ ಪುಷ್ಪಗುಚ್ಛವನ್ನು ಸ್ವೀಕರಿಸಿರುವುದು ವಿಶೇಷವಾಗಿತ್ತು.

Leave a Reply

comments

Related Articles

error: