ಕರ್ನಾಟಕಪ್ರಮುಖ ಸುದ್ದಿಮೈಸೂರು

ಕಸ್ತೂರಿ ರಂಗನ್ ವರದಿ ವಿರೋಧಿಸಿ ಅನಿರ್ದಿಷ್ಟ ಬಂದ್‍ಗೆ ಉತ್ತಮ ಪ್ರತಿಕ್ರಿಯೆ

ಮಡಿಕೇರಿ, ಜೂ.9 : ಶ್ರೀಕ್ಷೇತ್ರ ತಲಕಾವೇರಿ ಮತ್ತು ಭಾಗಮಂಡಲ ಭಾಗದಲ್ಲಿ ತಲಕಾವೇರಿ ವನ್ಯಧಾಮ ಪ್ರದೇಶವನ್ನು ಸೂಕ್ಷ್ಮ ಪರಿಸರ ತಾಣಕ್ಕೆ ಸೇರ್ಪಡೆಗೂಳಿಸಿ ಬಫರ್ ಜೋನ್ ಮಿತಿಯನ್ನು 1 ಕಿ.ಮೀ.ನಿಂದ 16 ಕಿ.ಮೀ. ವರೆಗೆ ವಿಸ್ತರಿಸಿರುವುದನ್ನು ವಿರೋಧಿಸಿ ಭಾಗಮಂಡಲದ ಕಸ್ತೂರಿ ರಂಗನ್ ವರದಿ ವಿರೋಧಿ ಹೋರಾಟ ಸಮಿತಿ ವತಿಯಿಂದ ಇಂದಿನಿಂದ ಅನಿರ್ದಿಷ್ಟಾವಧಿ ಬಂದ್ ಗೆ ಕರೆ ನೀಡಿದ್ದು, ಬಂದ್‍ಗೆ ಸಾರ್ವಜನಿಕವಾಗಿ ಉತ್ತಮ ಪ್ರತಿಕ್ರಿಯೆ ಕಂಡುಬಂದಿದೆ.

ಬೆಳ್ಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್‍ಗೆ ಬೆಂಬಲ ಸೂಚಿಸಿದ್ದು, ನಾಳೆ ಮತ್ತು ನಾಳಿದ್ದು ಕೂಡ ಬಂದ್ ಮುಂದುವರಿಯಲಿದೆ. ಜೂನ್ 12 ರಂದು ಬಹಿರಂಗ ಸಭೆ ಏರ್ಪಡಿಸಿದ್ದು, ಮಧ್ಯಾಹ್ನ 2 ಗಂಟೆವರೆಗೆ ಬಂದ್ ಅಚರಿಸಿ ಸಭೆ ನಡೆಸಲಾಗುವುದು. ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಭಾಗಮಂಡಲದ ಕಸ್ತೂರಿ ರಂಗನ್ ವಿರೋಧಿ ಹೋರಾಟ ಸಮಿತಿ ಸೂಚಿಸಿದ್ದಾರೆ.

ಬಂದ್‍ಗೆ ಸುತ್ತಮುತ್ತಲಿನ ಗ್ರಾಮಸ್ಥರು ವಾಹನ ಮಾಲೀಕರು, ಆಟೋ ಚಾಲಕರು, ಮಾಲೀಕರ ಸಂಘ ಹಾಗೂ ಸ್ಥಳೀಯ ನಿವಾಸಿಗಳು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್ ಗೆ ಬೆಂಬಲವಾಗಿ ನಿಂತಿದ್ದಾರೆ. ಬಂದ್‍ನಿಂದ ಪ್ರವಾಸಿಗರಿಗೆ, ಭಕ್ತರಿಗೆ ತೊಂದರೆ ಉಂಟಾಗಿದ್ದಲ್ಲದೇ ಪ್ರವಾಸಿಗರ ವಾಹನಗಳಿಗೂ, ಕ್ಷೇತ್ರಗಳಿಗೆ ತೆರಳುವ ಭಕ್ತರ ವಾಹನಗಳನ್ನು ಭಾಗಮಂಡಲದ ಮುಖ್ಯ ಪ್ರವೇಶದ್ವಾರದ ಬಳಿ ತಡೆಯಲಾಗಿದೆ. ಇದರಿಂದ ಭಗಂಡೇಶ್ವರ ಹಾಗೂ ತಲಕಾವೇರಿ ಸನ್ನಿಧಿಗೆ ಪ್ರವಾಸಿಗರು ಮತ್ತು ಭಕ್ತರು ನಡೆದುಕೊಂಡು ಹೋಗುವ ಪರಿಸ್ಥಿತಿ ಎದುರಾಗಿದೆ.

-ಕೆ.ಸಿ.ಐ/ಎಸ್.ಎನ್/ಎನ್.ಬಿ.

Leave a Reply

comments

Related Articles

error: