ಮೈಸೂರು

ಹೋರಾಟದ ಹೊರತು ಬಡತನ ನಿರ್ಮೂಲನೆ ಅಸಾಧ್ಯ: ದೊರೆಸ್ವಾಮಿ

ಮೈಸೂರು, ಜೂ.10: ದೇಶಕ್ಕೆ ಸ್ವಾತಂತ್ರ್ಯ ದೊರಕಿ ೭೦ವರ್ಷಗಳೇ ಕಳೆದರು ಬಡತನ ನಿರ್ಮೂಲನೆಯಾಗಿಲ್ಲ. ರಾಜಕಾರಣಿಗಳ ತಾತ್ಸಾರ ಭಾವದಿಂದ ಇಂದಿಗೂ ಬಡತನ ತಾಂಡವವಾಡುತ್ತಿದ್ದು ಹೋರಾಟದ ಹೊರತಾಗಿ ಬಡತನ ನಿರ್ಮೂಲನೆ ಸಾಧ್ಯವಿಲ್ಲ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ತಿಳಿಸಿದರು.
ಶನಿವಾರ ನಗರದ ಕೃಷ್ಣಮೂರ್ತಿಪುರಂನ ಶ್ರೀರಾಮಮಂದಿರದಲ್ಲಿ ಆಯೋಜಿಸಿದ್ದ ಬಿ.ನಾರಾಯಣಸ್ವಾಮಿ ಅವರ ಆತ್ಮಕತೆ ನನ್ನ ನೆನಪಿನಲ್ಲಿ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಕೃತಿ ಬಿಡುಗಡೆ ಮಾಡಿ ಬಳಿಕ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದರೆ ದೇಶದಲ್ಲಿನ ಬಡತನ ನಿರ್ಮೂಲನೆಯಾಗುತ್ತದೆ ಎಂದೇ ಭಾವಿಸಲಾಗಿತ್ತು. ಆದರೆ ಬಡತನ ಇನ್ನಷ್ಟು ಹೆಚ್ಚಾಗುತ್ತಲೇ ಇದೆ. ಅಂದು ಬ್ರಿಟಿಷರ ಕಪಿಮುಷ್ಠಿಯಿಂದ ಮುಕ್ತಿ ಪಡೆಯಬೇಕು ಎಂದೆನಿಸುತ್ತಿತ್ತು. ಆದರೆ ಇಂದು ಹೋರಾಟ ಮಾಡಿ ಪಡೆದ ಸ್ವಾತಂತ್ರ್ಯ ಏತಕ್ಕಾಗಿ ಎಂದೆನಿಸುತ್ತಿದೆ. ಜನರಿಗೆ ಆಶ್ವಾಸನೆ ನೀಡಿ ಚುನಾವಣೆಯಲ್ಲಿ ಗೆಲುವು ಸಾಧಿಸಿ ಅಧಿಕ್ಕಾರಕ್ಕೇರುವ ರಾಜಕಾರಣಿಗಳು ವಿಧಾನಸಭೆಯಲ್ಲಿ ರೈತರ ಸಮಸ್ಯೆಗಳ ಬಗ್ಗೆ ಚರ್ಚೆಯನ್ನೇ ಮಾಡುವುದಿಲ್ಲ. ಹಾಗಾಗಿ ಮತದಾರರು ತಮ್ಮ ಬಗೆಗೆ ಕಾಳಜಿ ಇರುವ ಯೋಗ್ಯರನ್ನು ಆಯ್ಕೆ ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ವಾಸು, ಎಂ.ಕೆ.ಸೋಮಶೇಖರ್, ಮೈಸೂರು ಜಿಲ್ಲೆ ಮತ್ತು ನಗರ ಸ್ವಾತಂತ್ರ್ಯ ಹೋರಾಟಗಾರರ ಸಂಘದ ಅಧ್ಯಕ್ಷ ಡಾ.ಎಂ.ಜಿ.ಕೃಷ್ಣಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: