ಕರ್ನಾಟಕಪ್ರಮುಖ ಸುದ್ದಿಮೈಸೂರು

ಸರ್ಕಾರದ ರೈತ ವಿರೋಧಿ ನಿಲುವನ್ನು ಖಂಡಿಸಿ ಜುಲೈ 7ರಿಂದ ಧರಣಿ ಸತ್ಯಾಗ್ರಹ : ಬಿ.ಎಸ್.ಯಡಿಯೂರಪ್ಪ

ಮೈಸೂರು,ಜೂ.11:- ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಪಿಂಜರಾಪೋಲ್ ನಿರಾಶ್ರಿತ ಗೋವುಗಳ ಪುನರ್ ವಸತಿ ಕೇಂದ್ರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಭೇಟಿ ನೀಡಿದರು. ಕೃಷ್ಣಮಂದಿರದಲ್ಲಿ ಪೂಜೆ ಸಲ್ಲಿಸಿದ ನಂತರ ಗೋಶಾಲೆಯಲ್ಲಿ ಗೋವಿಗೆ ಆಹಾರ ನೀಡಿದರು.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದರೂ ರಾಜ್ಯ ಸರ್ಕಾರ ರೈತರ ನೆರವಿಗೆ ಧಾವಿಸಿಲ್ಲ. ಸರ್ಕಾರದ ರೈತ ವಿರೋಧಿ ನಿಲುವನ್ನು ಖಂಡಿಸಿ ಬರುವ ಜುಲೈ 7, 8, 9 ರಂದು ಧರಣಿ ಸತ್ಯಾಗ್ರಹ ನಡೆಸುತ್ತೇವೆ. ಜುಲೈ 10 ರಂದು ಬೃಹತ್ ಪ್ರತಿಭಟನಾ ಸಭೆ ನಡೆಸಲಿದ್ದು, ಸುಮಾರು  4 ಲಕ್ಷ ಮಂದಿ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಮಹಿಳೆಯರು, ಮಕ್ಕಳ ಮೇಲೆ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವಧಿಯಲ್ಲಿ ಕೊಲೆ ಸುಲಿಗೆ ಪ್ರಕರಣಗಳು, ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿವೆ ಎಂದು ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಉತ್ತರ ಪ್ರದೇಶ, ಮಹಾರಾಷ್ಟ್ರ ರಾಜ್ಯದಲ್ಲಿ ಸಹಕಾರಿ ಬ್ಯಾಂಕುಗಳ ಸಾಲಮನ್ನಾ ಆಗಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಎರಡು ಬಾರಿ ಸಾಲ ಮನ್ನಾ ಮಾಡಿದ್ದೇವೆ. ,ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಾಲ ಮನ್ನಾ ಮಾಡಲಿ. ಸಾಲಮನ್ನಾ ವಿಚಾರದಲ್ಲಿ ಇಗೋ  ಪ್ರಶ್ನೆಯೇ ಇಲ್ಲ. ಸಾಲಮನ್ನಾ ಮಾಡಿದರೆ ನಾನೇ ಖುದ್ದಾಗಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಸದ ಪ್ರತಾಪ್ ಸಿಂಹ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ್ ಪ್ರಸಾದ್, ಎಂ.ಶಿವಣ್ಣ, ಬಿ.ಮಂಜುನಾಥ್ ಸೇರಿದಂತೆ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.( ಕೆ.ಎಸ್,ಎಸ್.ಎಚ್)

Leave a Reply

comments

Related Articles

error: