ಪ್ರಮುಖ ಸುದ್ದಿಮೈಸೂರು

ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಯಡಿಯೂರಪ್ಪ ಭೇಟಿ

ಮೈಸೂರು,ಜೂ.12:- ಇಲ್ಲಿನ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೋಮವಾರ ಭೇಟಿ ನೀಡಿದರು.

ಜನಸಂಪರ್ಕ ಅಭಿಯಾನ ಪ್ರಯುಕ್ತ ಭಾನುವಾರ ನಗರಕ್ಕಾಗಮಿಸಿದ ಬಿ.ಎಸ್.ಯಡಿಯೂರಪ್ಪ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳನ್ನು ಭೇಟಿ ಮಾಡಿದರು. ಅವರ ಜೊತೆ ಉಭಯಕುಶಲೋಪರಿ ವಿಚಾರಿಸಿದ ಬಳಿಕ ಜನ್ಮದಿನದ ಸಂದರ್ಭದಲ್ಲಿ ಬೇರೆ ಬೇರೆ ಜಿಲ್ಲೆಗಳಲ್ಲಿ ಜನ ಸಂಪರ್ಕ ಅಭಿಯಾನದಲ್ಲಿ ತೊಡಗಿಸಿಕೊಂಡಿದ್ದ ಕಾರಣ ಬರಲಾಗಲಿಲ್ಲ ಎಂದು ಕ್ಷಮೆಯಾಚಿಸಿದರು. ಬಳಿಕ ಶ್ರೀಗಳು ರಾಜಕೀಯ ಬೆಳವಣಿಗೆಗಳ ಕುರಿತು ವಿಚಾರಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: