ಸುದ್ದಿ ಸಂಕ್ಷಿಪ್ತ

ವಿಶ್ವರಕ್ತದಾನ ದಿನಾಚರಣೆ : ಜೂ.14ಕ್ಕೆ ರಕ್ತದಾನ ಶಿಬಿರ

ಮೈಸೂರು.ಜೂ.12 : ಜೆ.ಎಸ್.ಎಸ್. ಆಸ್ಪತ್ರೆ ಹಾಗೂ ಶಿಕ್ಷಣ ಸಮೂಹ ಸಂಸ್ಥೆಗಳಿಂದ ಜೂ.14ರಂದು ಬೆಳಿಗ್ಗೆ 11ಕ್ಕೆ ಜೆ.ಎಸ್.ಎಸ್. ಆಸ್ಪತ್ರೆಯ ಶ್ರೀರಾಜೇಂದ್ರ ಶತಮಾನೋತ್ಸವ ಭವನದಲ್ಲಿ ವಿಶ್ವರಕ್ತದಾನ ದಿನಾಚರಣೆಯಂಗವಾಗಿ ರಕ್ತದಾನ ಶಿಬಿರವನ್ನು ಆಯೋಜಿಸಿದೆ. ಮಹಾಪೌರ ಎಂ.ಜೆ.ರವಿಕುಮಾರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ.ಡಿ.ಚನ್ನಣ್ಣನವರ್ ಭಾಗವಹಿಸುವರು. ಬೆಳಿಗ್ಗೆ8.45ಕ್ಕೆ ಬೀದಿ ನಾಟಕದೊಂದಿಗೆ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ವಿಭಾಗದ ನಿರ್ದೇಶಕ ಹಾಗೂ ಇತರರು ಪಾಲ್ಗೊಳ್ಳುವರು. ಆಸಕ್ತ ಸ್ವಯಂ ಪ್ರೇರಿತ ರಕ್ತದಾನಿಗಳು ಹೆಸರು ನೋಂದಾಯಿಸಿಕೊಳ್ಳಬಹುದು. (ಕೆ.ಎಂ.ಆರ್)

Leave a Reply

comments

Related Articles

error: