ಕ್ರೀಡೆಪ್ರಮುಖ ಸುದ್ದಿ

ಮತ್ತೊಂದು ದಾಖಲೆ ಬರೆಯಲಿದ್ದಾರೆ ವಿರಾಟ್ ಕೊಹ್ಲಿ

ಪ್ರಮುಖ ಸುದ್ದಿ, ಕ್ರೀಡೆ, ಲಂಡನ್, ಜೂ.೧೩: ವಿಶ್ವ ಕ್ರಿಕೆಟ್ ನಲ್ಲಿ ತಮ್ಮ ವಿಭಿನ್ನ ಹಾಗೂ ವಿಶಿಷ್ಟ ಬ್ಯಾಟಿಂಗ್‌ನಿಂದ ತನ್ನದೇ ಆದ ಛಾಪು ಮೂಡಿಸಿರುವ ಡೆಲ್ಲಿ ಡ್ಯಾಷರ್, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ಮೈಲಿಗಲ್ಲು ನಿರ್ಮಿಸಲು ಸಜ್ಜಾಗಿದ್ದಾರೆ. ಆ ಮೂಲಕ ಮತ್ತೊಂದು ದಾಖಲೆಯನ್ನು ತಮ್ಮ ದಾಖಲೆಪುಟಕ್ಕೆ ಸೇರಿಸಿಕೊಳ್ಳಲಿದ್ದಾರೆ.
ಹೌದು, ಆರಂಭದಿಂದಲೂ ವಿಶ್ವ ಕ್ರಿಕೆಟ್‌ನಲ್ಲಿ ಪಾರಮ್ಯ ಮೆರೆಯುತ್ತಿರುವ ಕೊಹ್ಲಿ ಕೇವಲ ೮೮ ರನ್ ಗಳಿಸಿದರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವೇಗವಾಗಿ ೮ ಸಾವಿರ ರನ್ ಪೂರೈಸಿದ ವಿಶ್ವದ ಮೊದಲ ಕ್ರಿಕೆಟಿಗ ಎಂಬ ಕೀರ್ತಿಗೆ ಭಾಜನರಾಗಲಿದ್ದಾರೆ. ೧೮೨ ಪಂದ್ಯಗಳಲ್ಲಿ ೧೭೪ ಇನ್ನಿಂಗ್ಸ್‌ಗಳಿಂದ ಒಟ್ಟು ೭,೯೧೨ ರನ್ ಗಳಿಸಿರುವ ಕೊಹ್ಲಿ ೮೮ ರನ್‌ಗಳಿಸಿದರೆ ೮ ಸಾವಿರ ರನ್ ಪೂರೈಸಲಿದ್ದಾರೆ. ಈ ಮೂಲಕ ಅತೀ ವೇಗವಾಗಿ ೮ ಸಾವಿರ ರನ್ ಪೇರಿಸಿದ ದಾಖಲೆ ಬರೆದ ಮೊದಲ ಆಟಗಾರನಾಗಲಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ವೇಗವಾಗಿ ೮ಸಾವಿರ ರನ್ ಪೂರೈಸಿದ ಕ್ರಿಕೆಟಿಗರ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾದ ಎಬಿಡಿ ವಿಲಿಯರ್ಸ್ ಸ್ಥಾನ ಪಡೆದಿದ್ದು, ಒಟ್ಟು ೧೯೦ ಪಂದ್ಯಗಳಲ್ಲಿ ೧೮೨ ಇನ್ನಿಂಗ್ಸ್ ಗಳಿಂದ ೮ ಸಾವಿರ ರನ್ ಪೂರೈಸಿದ್ದರು. ಇದೀಗ ಕೊಹ್ಲಿ ಆ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಳ್ಳಲು ತಿದಿಗಾಲಿನಲ್ಲಿ ನಿಂತಿದ್ದಾರೆ. ಬಾಂಗ್ಲಾದೇಶದ ವಿರುದ್ಧ ನಡೆಯಲಿರುವ ಸೆಮಿಫೈನಲ್ ಪಂದ್ಯದಲ್ಲಿ ಆ ಗುರಿ ಮುಟ್ಟಲಿದ್ದಾರೆ ಕಾದು ನೋಡಬೇಕಿದೆ. (ವರದಿ ಬಿ.ಎಂ)

Leave a Reply

comments

Related Articles

error: