ಸುದ್ದಿ ಸಂಕ್ಷಿಪ್ತ

ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ

ಮಡಿಕೇರಿ, ಜೂ.13 : ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗೆ ಜೂನ್, 15 ರಿಂದ 22 ರವರೆಗೆ ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಸಂತ ಮೈಕಲರ ಪ್ರೌಢ ಶಾಲೆ, ಸೋಮವಾರಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು  ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ವಿರಾಜಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ನಡೆಯಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ನಿಯಮಬಾಹಿರ ಚಟುವಟಿಕೆ ಹಾಗೂ ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ಪರೀಕ್ಷೆಗಳನ್ನು ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿಷೇಧಿತ ಸ್ಥಳ ಎಂದು ಘೋಷಿಸಿ, ಹಾಗೂ ಈ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ದಿನದಂದು ಮುಚ್ಚುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯಾದ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಆದೇಶ ಹೊರಡಿಸಿದ್ದಾರೆ. (ವರದಿ: ಕೆಸಿಐ, ಎಲ್.ಜಿ)

Leave a Reply

comments

Related Articles

error: