ಮೈಸೂರು

ಹೆಚ್ಚು ಶ್ರಮಪಟ್ಟರೆ ಮಾತ್ರ ಉತ್ತಮ ಸಾಧನೆ ಮಾಡಲು ಸಾಧ್ಯ : ಜಿ.ಜಗದೀಶ್

ಮೈಸೂರು,ಜೂ.14:- ನಗರದ ಸರಸ್ವತಿಪುರಂನಲ್ಲಿರುವ ಜೆಎಸ್ಎಸ್ ಮಹಿಳಾಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿಯಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿನಿಯರಿಗೆ ಪ್ರತಿಭಾಪುರಸ್ಕಾರ ಹಾಗೂ ನೂತನವಾಗಿ ಕಾಲೇಜಿಗೆ ಸೇರ್ಪಡೆಗೊಂಡ ವಿದ್ಯಾರ್ಥಿನಿಯರಿಗೆ ಸ್ವಾಗತ ಕಾರ್ಯಕ್ರಮವನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಮೈಸೂರು ಮಹಾನಗರಪಾಲಿಕೆಯ ಆಯುಕ್ತ ಜಿ.ಜಗದೀಶ್ ಉದ್ಘಾಟಿಸಿದರು. ಈ ಸಂದರ್ಭ ವಿದ್ಯಾರ್ಥಿನಿಯರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.  ಅತಿಹೆಚ್ಚು ಅಂಕಪಡೆದ ವಿದ್ಯಾರ್ಥಿನಿಯರನ್ನು ಜಿ.ಜಗದೀಶ್ ಸನ್ಮಾನಿಸಿದರು. ಈ ಸಂದರ್ಭ ಮಾತನಾಡಿದ ಅವರು ಇಲ್ಲಿ ಕೆಲವು ವಿದ್ಯಾರ್ಥಿನಿಯರು 100ಕ್ಕೆ 100 ಅಂಕಗಳನ್ನು ಗಳಿಸಿದ್ದಾರೆ. ನಿಜಕ್ಕೂ ಶ್ಲಾಘನೀಯ. ಓದಿನ ಜೊತೆ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಬೇಕು. ಯಾವುದೇ ಒಂದು ಸಂಪತ್ತನ್ನು ಕಳ್ಳತನ ಮಾಡಬಹುದು. ಆದರೆ ವಿದ್ಯೆ ಕದಿಯಲಾಗದಂತಹ ವಸ್ತು. ವಿದ್ಯಾರ್ಥಿ ಜೀವನದಲ್ಲಿ ಹೆಚ್ಚು ಶ್ರಮಪಟ್ಟರೆ ಉತ್ತಮ ಸಾಧನೆ ಮಾಡಲು ಸಾಧ್ಯ. ಪರಿಸರ ಉಳಿವಿಗಾಗಿ  ಪ್ರಮಾಣವಚನ ಸ್ವೀಕರಿಸಿದ್ದು ನಿಜಕ್ಕೂ ಸಂತೋಷದ ವಿಷಯ. ಪರಿಸರ ಉಳಿಸುವ ಕಾರ್ಯ ಯುವಜನತೆಯಿಂದಲೇ ನಡೆಯಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಜೆಎಸ್ಎಸ್ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ.ಬೆಟಸೂರ್ ಮಠ್, ಕನ್ನಡ ವಿಭಾಗದ ಉಪನ್ಯಾಸಕ ಡಾ.ಮಹೇಂದ್ರ,ಕನ್ನಡ ವಿಭಾಗದ ಮುಖ್ಯಸ್ಥ ನಟರಾಜು ಎಂ.ಎಸ್, ಪ್ರಾಂಶುಪಾಲೆ ರಾಜೇಶ್ವರಿ ಎಂ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: