ಮೈಸೂರು

ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆ : ನಿಷೇಧಾಜ್ಞೆ ಜಾರಿ

ಚಾಮರಾಜನಗರ, ಜೂ. 14 : ಜಿಲ್ಲೆಯ ಚಾಮರಾಜನಗರ, ಯಳಂದೂರು, ಕೊಳ್ಳೇಗಾಲ, ಗುಂಡ್ಲುಪೇಟೆ ಹಾಗೂ ಹನೂರು ವ್ಯಾಪ್ತಿಯ 11 ಪರೀಕ್ಷಾ ಕೇಂದ್ರಗಳಲ್ಲಿ ಜೂನ್ 15 ರಿಂದ 22ರವರೆಗೆ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಬಿ. ರಾಮು ಅವರು ಆದೇಶ ಹೊರಡಿಸಿದ್ದಾರೆ.

ಪರೀಕ್ಷಾ ದಿನಗಳಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ನಿಷೇದಾಜ್ಞೆ ಆದೇಶ ಜಾರಿಯಲ್ಲಿರುತ್ತದೆ. ಅಲ್ಲದೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಬೆಳಿಗ್ಗೆ 7 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಮುಚ್ಚುವಂತೆಯೂ ಆದೇಶ ಹೊರಡಿಸಲಾಗಿದೆ.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಮತ್ತು ಪರೀಕ್ಷಾ ಕೆಲಸಕ್ಕೆ ನಿಯೋಜಿತರಾಗಿರುವ ಸಿಬ್ಬಂದಿವರ್ಗಕ್ಕೆ ನಿಷೇದಾಜ್ಞೆ ಆದೇಶ ಅನ್ವಯವಾಗುವುದಿಲ್ಲವೆಂದು ಜಿಲ್ಲಾಧಿಕಾರಿ ಬಿ. ರಾಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

-ಎನ್.ಬಿ.ಎನ್.

Leave a Reply

comments

Related Articles

error: