ಮೈಸೂರು

ಸಮಾಜದಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಅರ್ಜುನ್ ಎಸ್.ಮಳ್ಳೂರ್

ಮೈಸೂರು,(ಪಿರಿಯಾಪಟ್ಟಣ),ಜೂ.15-ಸಮಾಜದಲ್ಲಿ ಇನ್ನೂ ಬಾಲಕಾರ್ಮಿಕದಂತಹ ಅನಿಷ್ಟ ಪದ್ಧತಿಗಳು ಜೀವಂತವಾಗಿದೆ ಎಂದು ಪಟ್ಟಣದ ಜೆಎಂಎಫ್‍ಸಿ ನ್ಯಾಯಾಲಯದ  ಹಿರಿಯ ಶ್ರೇಣಿ ನ್ಯಾಯಾಧೀಶ ಅರ್ಜುನ್ ಎಸ್.ಮಳ್ಳೂರ್ ವಿಷಾದ ವ್ಯಕ್ತಪಡಿಸಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ, ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಪೊಲೀಸ್ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಹಾಗೂ ಮಕ್ಕಳ ಹಕ್ಕುಗಳ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯಾವ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ಸರ್ವಶಿಕ್ಷಣ ಅಭಿಯಾನದ ಮೂಲಕ ಉಚಿತ ಕಡ್ಡಾಯ ಶಿಕ್ಷಣ ಯೋಜನೆಯನ್ನು ಜಾರಿಗೊಳಿಸಿದೆ. ಅಲ್ಲದೆ, ವಿದ್ಯಾರ್ಥಿಗಳಿಗಾಗಿ ಅನೇಕ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದರೂ ಬಾಲಕಾರ್ಮಿಕ ಪದ್ಧತಿಯನ್ನು ತಡೆಗಟ್ಟಲು ಸಾಧ್ಯವಾಗಿಲ್ಲ. ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಹಲವು ಕಠಿಣ ಕಾನೂನುಗಳನ್ನು ಜಾರಿಗೊಳಿಸಿದ್ದರೂ ಇನ್ನೂ ಬಾಲಕಾರ್ಮಿಕರು ಅನೇಕ ಕಡೆಗಳಲ್ಲಿ ದುಡಿಯುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಜೆಎಂಎಫ್ ಸಿ ಕಿರಿಯ ಶ್ರೇಣಿ ನ್ಯಾಯಾಧೀಶ ಜೆ.ಜಯಶಂಕರ್, ತಹಸಿಲ್ದಾರ್ ಜೆ.ಮಹೇಶ್, ಕಾರ್ಮಿಕ ನಿರೀಕ್ಷಕ ಕೆ.ಪಿ.ಅರುಣ್ ಕುಮಾರ್, ತಾಪಂ ಸಹಾಯಕ ನಿರ್ದೇಶಕ ಬಾಬು, ವಕೀಲರ ಸಂಘದ ಅಧ್ಯಕ್ಷ ಕೆ.ಭಾಸ್ಕರ್, ಕಾರ್ಯದರ್ಶಿ ಎಂ.ಸಿ.ಹರೀಶ್, ಬಿಆರ್‍ಸಿ ಹೇಮಂತ್ ಕುಮಾರ್, ಶಿಕ್ಷಕರಾದ ಮಹದೇವಪ್ಪ, ನಟರಾಜು ಸೇರಿದಂತೆ ಮತ್ತಿತರರು ಹಾಜರಿದ್ದರು. (ವರದಿ-ಎಂ.ಎನ್)

Leave a Reply

comments

Related Articles

error: