ಸುದ್ದಿ ಸಂಕ್ಷಿಪ್ತ

ವಯೋಶ್ರೇಷ್ಠ ಸಮ್ಮಾನ್ ರಾಷ್ಟ್ರ ಪ್ರಶಸ್ತಿ : ಅರ್ಜಿ ಆಹ್ವಾನ

ಮೈಸೂರು,ಜೂ.15-ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಹಿರಿಯ ನಾಗರಿಕರ ಏಳಿಗೆಗಾಗಿ ಶ್ರಮಿಸುತ್ತಿರುವ ವ್ಯಕ್ತಿ, ಸಂಸ್ಥೆಗೆ 2017ನೇ ಸಾಲಿನ ಹಿರಿಯ ನಾಗರಿಕರರಿಗೆ `ವಯೋಶ್ರೇಷ್ಠ ಸಮ್ಮಾನ್ಸ್’ ರಾಷ್ಟ್ರ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವ್ಯಕ್ತಿ/ ಸಂಸ್ಥೆ ಅರ್ಜಿ ನಮೂನೆಯನ್ನು ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ವೆಬ್‍ಸೈಟ್ URL http://socialjustice.nic.in ನಿಂದ ಅಥವಾ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಪುಲಿಕೇಶಿ ರಸ್ತೆ, ತಿಲಕ್‍ನಗರ, ಮೈಸೂರು-570 001 ಇವರಿಂದ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಆಂಗ್ಲಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಜೂ.19 ರೊಳಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲಿಕರಣ ಇಲಾಖೆ, ಪುಲಿಕೇಶಿ ರಸ್ತೆ, ತಿಲಕ್‍ನಗರ ಮೈಸೂರು-570 001 ದೂ.ಸಂ. 0821-2490111 ಸಂಪರ್ಕಿಸುವುದು. (ವರದಿ-ಎಂ.ಎನ್)

Leave a Reply

comments

Related Articles

error: