ಸುದ್ದಿ ಸಂಕ್ಷಿಪ್ತ

ಜೂ.17ರಂದು ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಮಡಿಕೇರಿ,ಜೂ.16:- ಮಡಿಕೇರಿ ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನವು ಜೂನ್, 17 ರಂದು ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಜೂನ್, 17 ರಂದು ಬೆಳಗ್ಗೆ 8 ಗಂಟೆಗೆ ಧ್ವಜಾರೋಹಣ, ನಂತರ ಬೆಳಗ್ಗೆ 8.30 ಗಂಟೆಗೆ ಮುಖ್ಯ ದ್ವಾರ ಉದ್ಘಾಟನೆ, ಬೆಳಗ್ಗೆ 9 ಗಂಟೆಗೆ ಕೋಟೆ ಆವರಣದಲ್ಲಿ ಸಮ್ಮೇಳನ ಅಧ್ಯಕ್ಷರ ಮೆರವಣಿಗೆಗೆ ಚಾಲನೆ, ಬೆಳಗ್ಗೆ 10 ಗಂಟೆಗೆ ಭಾರತೀಸುತ ಪುಸ್ತಕ ಮಳಿಗೆ ಉದ್ಘಾಟನೆ, ಬೆಳಗ್ಗೆ 10.15 ಗಂಟೆಗೆ ಸಭಾಂಗಣ ಉದ್ಘಾಟನೆ, ಬೆಳಗ್ಗೆ 10.30 ಗಂಟೆಗೆ ಅಂಬಾಳೆ ಸುಬ್ಬರಾವ್ ವೇದಿಕೆ ಉದ್ಘಾಟನೆ, ನಂತರ  ಬೆಳಗ್ಗೆ 11 ಗಂಟೆಗೆ ಸಮಾರಂಭದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಕನ್ನಡ ಸಾಹಿತ್ಯ  ಪರಿಷತ್ ತಂಡದವರಿಂದ ನಾಡಗೀತೆ, ಕನ್ನಡ  ಸಾಹಿತ್ಯ ಪರಿಷತ್ ತಂಡದವರಿಂದ ರೈತಗೀತೆ, ಕ.ಸಾ.ಪ. ಜಿಲ್ಲಾಧ್ಯಕ್ಷರಾದ ಬಿ.ಎಸ್.ಲೋಕೇಶ್ ಸಾಗರ್, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಮಡಿಕೇರಿ ತಾಲ್ಲೂಕು 7ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಡಾ.ಶ್ರೀಧರ್ ಹೆಗಡೆ, ಮಡಿಕೇರಿ ತಾಲ್ಲೂಕು 8ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ  ಬಿ.ಎ.ಷಂಶುದ್ದೀನ್ ಜಿ.ಪಂ. ಅಧ್ಯಕ್ಷರಾದ ಬಿ.ಎ.ಹರೀಶ್, ಶಾಸಕರಾದ ಕೆ.ಜಿ.ಬೋಪಯ್ಯ, ಸುನಿಲ್ ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ, ಕ.ಸಾ.ಪ. ನಿಕಟಪೂರ್ವ ಅಧ್ಯಕ್ಷರಾದ ಟಿ.ಪಿ.ರಮೇಶ್ ಇತರರು ಪಾಲ್ಗೊಳ್ಳಲಿದ್ದಾರೆ.

ನಂತರ  ಮಧ್ಯಾಹ್ನ 12 ಗಂಟೆಗೆ ವಿಚಾರಗೋಷ್ಠಿ, ಮಧ್ಯಾಹ್ನ 1 ಗಂಟೆಗೆ ಕನ್ನಡ ಗೀತಗಾಯನ, ಮಧ್ಯಾಹ್ನ 2 ಗಂಟೆಗೆ ಕವಿಗೋಷ್ಠಿ, ಮಧ್ಯಾಹ್ನ 3.30 ಗಂಟೆಗೆ ಬಹಿರಂಗ ಅಧಿವೇಶನ, ನಂತರ ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಸಮಾರೋಪ  ಸಮಾರಂಭದಲ್ಲಿ ಕ.ಸಾ.ಪ.ಅಧ್ಯಕ್ಷರಾದ ಕುಡೆಕಲ್  ಸಂತೋಷ್, ಸಮ್ಮೇಳನಾಧ್ಯಕ್ಷರಾದ ಬಿ.ಎ.ಷಂಶುದ್ದೀನ್, ಕ.ಸಾ.ಪ. ಜಿಲ್ಲಾಧ್ಯಕ್ಷರಾದ ಬಿ.ಎಸ್.ಲೋಕೇಶ್ ಸಾಗರ್, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಕೊಲ್ಯದ ಗಿರೀಶ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಬಿದ್ದಾಟಂಡ ಎಸ್.ತಮ್ಮಯ್ಯ, ಇತರರು ಪಾಲ್ಗೊಳ್ಳಲಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: