ಸುದ್ದಿ ಸಂಕ್ಷಿಪ್ತ

ಜೂ.19 ರಂದು ವಿದ್ಯುತ್ ವ್ಯತ್ಯಯ

ಮಡಿಕೇರಿ,ಜೂ.16:- ಶನಿವಾರಸಂತೆ ವಿದ್ಯುತ್  ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಅಂಕನಹಳ್ಳಿ ಫೀಡರ್ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಜೂನ್, 19 ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಶನಿವಾರಸಂತೆ ವಿದ್ಯುತ್ ಉಪಕೇಂದ್ರದಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಅಂಕನಹಳ್ಳಿ, ಸೀಗೆಮರೂರು, ಕ್ಯಾತನಹಳ್ಳಿ, ಸಂಪಿಗೆದಾಳು, ದೊಡ್ಡಳ್ಳಿ, ಸಿಡಿಗಳಲೆ, ಹಾರೆಹೊಸೂರು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

 

 

Leave a Reply

comments

Related Articles

error: