ಸುದ್ದಿ ಸಂಕ್ಷಿಪ್ತ

ಅಡುಗೆ ಸಹಾಯಕರು ಮತ್ತು ಕಾವಲುಗಾರರ ಹುದ್ದೆಗಳ ನೇಮಕಾತಿ; ವೇಳಾಪಟ್ಟಿ ಪ್ರಕಟ

ಮಡಿಕೇರಿ ಜೂ.16:-ಕೊಡಗು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಡಿ’ ವೃಂದದ ಅಡುಗೆ ಸಹಾಯಕರು ಹಾಗೂ ಕಾವಲುಗಾರರ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ, ಪ್ರಾಯೋಗಿಕ ಪರೀಕ್ಷೆ ಮತ್ತು ದೈಹಿಕ ದಾರ್ಢ್ಯತೆ ಪರೀಕ್ಷೆಗೆ ವೇಳಾ ಪಟ್ಟಿಯನ್ನು ನಿಗದಿಪಡಿಸಲಾಗಿದೆ.

ಅಡುಗೆ ಸಹಾಯಕರು:- ಜೂನ್, 21ರಂದು ಬೆಳಗ್ಗೆ 10 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ದಾಖಲಾತಿಗಳ ಪರಿಶೀಲನೆ ನಡೆಯಲಿದೆ. ಜೂನ್, 30 ರಂದು ಬೆಳಗ್ಗೆ 10 ಗಂಟೆಯಿಂದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ/ನಂತರ ಬಾಲಕಿಯರ ವಿದ್ಯಾರ್ಥಿ ನಿಲಯ, ಮಡಿಕೇರಿ ಮತ್ತು ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ, ಮಡಿಕೇರಿ ಇಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ. ಜುಲೈ, 3 ರಂದು ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾಗಲಿದೆ. ಜುಲೈ, 20 ರಂದು ಅಂತಿಮ ಆಯ್ಕೆ ಪಟ್ಟಿ ಪ್ರಕಟವಾಗಲಿದೆ.

ಕಾವಲುಗಾರರು:- ಜೂನ್, 24 ರಂದು ಬೆಳಗ್ಗೆ 10 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ದಾಖಲಾತಿಗಳ ಪರಿಶೀಲನೆ ನಡೆಯಲಿದೆ. ಜೂನ್, 29 ರಂದು ಬೆಳಗ್ಗೆ 10 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ದೈಹಿಕ ದಾರ್ಢ್ಯತೆ ಪರೀಕ್ಷೆ ನಡೆಯಲಿದೆ. ಜುಲೈ, 05 ರಂದು ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾಗಲಿದೆ. ಜುಲೈ, 25 ರಂದು ಅಂತಿಮ ಆಯ್ಕೆ ಪಟ್ಟಿ ಪ್ರಕಟವಾಗಲಿದೆ. ಅಭ್ಯರ್ಥಿಯು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳ ಮೆರಿಟ್ ಆಧಾರದ ಮೇಲೆ ಸರ್ಕಾರ 1:5 ರ ಅನುಪಾತದಲ್ಲಿ ದಾಖಲಾತಿ ಪರಿಶೀಲನೆ ನಡೆಸಲು ನಿರ್ದೇಶಿಸಿದ್ದು ಅರ್ಹ ಅಭ್ಯರ್ಥಿಗಳು ಕಾಲ್‍ ಲೆಟರ್‍ನಲ್ಲಿ ತಿಳಿಸಿರುವಂತೆ ಅಗತ್ಯ ಮೂಲ ದಾಖಲಾತಿಗಳು, ಮೂಲ ದಾಖಲಾತಿಗಳ 2 ಸೆಟ್ ಜೆರಾಕ್ಸ್ ಪ್ರತಿಗಳು ಹಾಗೂ ಅಭ್ಯರ್ಥಿಯ ಇತ್ತೀಚಿನ 2 ಪಾಸ್‍ಪೋರ್ಟ್ ಅಳತೆಯ ಕಲರ್ ಭಾವಚಿತ್ರದೊಂದಿಗೆ ದಾಖಲಾತಿ ಪರಿಶೀಲನೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ:08272-225531 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: