ಸುದ್ದಿ ಸಂಕ್ಷಿಪ್ತ

ಅಪರಿಚಿತ ಶವ ಪತ್ತೆ

ಮೈಸೂರು,ಜೂ.17-ಸುಮಾರು 45 ವರ್ಷದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಬಗ್ಗೆ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಣೇಶ ನಗರ ಮುಖ್ಯರಸ್ತೆಯಲ್ಲಿರುವ ಸ್ಮಶಾನದ ಪಕ್ಕದ ದೇವಸ್ಥಾನದ ಗೋಡೆಗೆ ಒರಗಿಕೊಂಡಂತೆ ಕುಳಿತಿದ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. 5 ಅಡಿ ಎತ್ತರ, ಕೋಲು ಮುಖ, ಸಾಧಾರಣ ಮೈಕಟ್ಟುವುಳ್ಳ ವ್ಯಕ್ತಿಯ ಮೈ ಮೇಲೆ ಕೆಂಪು ಮತ್ತು ನೀಲಿ ಮಿಶ್ರಿತ ಬಣ್ಣದ ಟಿ-ಶರ್ಟ್, ಜೀನ್ಸ್ ಪ್ಯಾಂಟ್ ಇವೆ. ಇವರ ವಾರಸುದಾರರು ಯಾರಾದರೂ ಇದ್ದಲ್ಲಿ ದೂ.ಸಂ. 0821-2418312 ಸಂಪರ್ಕಿಸಬಹುದು. (ವರದಿ-ಎಂ.ಎನ್)

Leave a Reply

comments

Related Articles

error: